ಬಂಧನ
(ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವ ರೌಡಿಶೀಟರ್ ರಾಜೇಶ್ ಅಲಿಯಾಸ್ ಮೊಟ್ಟೆ ಎಂಬಾತನನ್ನು ಕೆಂಪೇಗೌಡನಗರ ಠಾಣೆ ಪೊಲೀಸರು ಗೂಂಡಾ ಕಾಯ್ದೆಯಡಿ ಬಂಧಿಸಿದ್ದಾರೆ.
2018ರಿಂದ ನಿರಂತರವಾಗಿ ಅಪರಾಧ ಕೃತ್ಯಗಳಲ್ಲಿ ರಾಜೇಶ್ ಭಾಗಿಯಾಗಿದ್ದಾನೆ. ಕೊಲೆ ಯತ್ನ, ಸುಲಿಗೆ, ಹಲ್ಲೆ, ಸಾಕ್ಷಿಗಳಿಗೆ ಬೆದರಿಕೆ ಸೇರಿ 12 ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದರು.
ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗಳಿಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ರಾಜೇಶ್ ವಿರುದ್ಧ ಜಾಮೀನು ರಹಿತ ಐದು ವಾರಂಟ್‌ಗಳು ಜಾರಿಯಾಗಿವೆ. ಆರೋಪಿಯು ಪದೇ ಪದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಕಾರಣ ಗೂಂಡಾ ಕಾಯ್ದೆಯಡಿ ಬಂಧಿಸಿ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.