ಸಾವು (ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ಮನೆಯ ಎದುರು ನಿಂತಿದ್ದ ರೌಡಿ ಶೀಟರ್ ಶಿವಕುಮಾರ್ ಅಲಿಯಾಸ್ ಬಿಕ್ಲು ಶಿವನನ್ನು (40) ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
ಹಲಸೂರು ಕೆರೆ ಬಳಿಯ ಮನೆಯ ಎದುರು ಶಿವಕುಮಾರ್ ನಿಂತಿದ್ದರು. ಕಾರಿನಲ್ಲಿ ಬಂದ ನಾಲ್ವರು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿ ಆಗಿದ್ದಾರೆ. ಮೃತದೇಹವನ್ನು ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ಸ್ಥಳಕ್ಕೆ ಜಂಟಿ ಪೊಲೀಸ್ ಕಮಿಷನರ್ ರಮೇಶ್ ಅವರು ಭೇಟಿ ನೀಡಿ ಪರಿಶೀಲಿಸಿದರು.
ಹಳೇ ದ್ವೇಷದ ಹಿನ್ನೆಲೆಯಲ್ಲಿ ಆರೋಪಿಗಳು ಕೃತ್ಯ ಎಸಗಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಶಿವಕುಮಾರ್ ಕುಟುಂಬದವರು ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕೊಲೆಯಾದ ಶಿವಕುಮಾರ್ ವಿರುದ್ಧ 11 ಪ್ರಕರಣಗಳು ದಾಖಲಾಗಿದ್ದವು. ಭಾರತಿನಗರ ಠಾಣೆಯಲ್ಲಿ ರೌಡಿ ಪಟ್ಟಿ ತೆರೆಯಲಾಗಿತ್ತು ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.