ಬಂಧನ
(ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ಹೊರ ರಾಜ್ಯದಿಂದ ನಾಡ ಪಿಸ್ತೂಲ್ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸಮೀರ್ ಬಂಧಿತ ರೌಡಿಶೀಟರ್.
‘ಸಮೀರ್ ಕೆ.ಜಿ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆಗಿದ್ದು, ದೆಹಲಿಯಲ್ಲಿ ಕಡಿಮೆ ಬೆಲೆಗೆ ನಾಡ ಪಿಸ್ತೂಲ್ ಖರೀದಿಸಿ ನಗರಕ್ಕೆ ತರುತ್ತಿದ್ದ’ ಎಂದು ಸಿಸಿಬಿ ಮೂಲಗಳು ತಿಳಿಸಿವೆ.
‘ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಲಾಯಿತು. ದೆಹಲಿಯಲ್ಲಿ ಕಡಿಮೆ ಬೆಲೆಗೆ ನಾಡ ಪಿಸ್ತೂಲ್ ಖರೀದಿಸಿ, ನಗರಕ್ಕೆ ತರುತ್ತಿದ್ದ. ಇಲ್ಲಿನ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ. ಆರೋಪಿಯಿಂದ ಎರಡು ನಾಡ ಪಿಸ್ತೂಲ್ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ’ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.