ADVERTISEMENT

ಪೊಲೀಸರಿಗೆ ಬೆದರಿಕೆ: ರೌಡಿಶೀಟರ್ ಬಂಧನ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2026, 14:36 IST
Last Updated 8 ಫೆಬ್ರುವರಿ 2026, 14:36 IST
<div class="paragraphs"><p>ಬಂಧನ</p></div>

ಬಂಧನ

   

ಬೆಂಗಳೂರು: ಕರ್ತವ್ಯಕ್ಕೆ ಅಡ್ಡಿಪಡಿಸಿ, ಪೊಲೀಸರಿಗೆ ಜೀವ ಬೆದರಿಕೆ ಹಾಕಿದ ರೌಡಿಶೀಟರ್‌ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಪಳನಿ ಅಲಿಯಾಸ್ ಕರ್ಚೀಫ್ ಪಳನಿ (42) ಬಂಧಿತ. ಬೆಳ್ಳಂದೂರು ಠಾಣೆ ವ್ಯಾಪ್ತಿಯ ರೌಡಿಶೀಟರ್‌ಗಳು ಸೇರಿ ಕೋಣನಕುಂಟೆ, ಕೆ.ಎಸ್‌. ಲೇಔಟ್‌, ವಿಲ್ಸನ್ ಗಾರ್ಡನ್, ಬೆಳ್ಳಂದೂರು ಸೇರಿ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಕೊಲೆ, ಕೊಲೆಗೆ ಯತ್ನ ಮತ್ತು ಮಕ್ಕಳ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದವರ ಬಗ್ಗೆ ಸಿಸಿಬಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದರು.

ADVERTISEMENT

ಈ ವೇಳೆ ಅಶೋಕ ನಗರ ಪೊಲೀಸ್ ಠಾಣೆಯ ರೌಡಿಶೀಟರ್ ಪಳನಿ, ಕಸವನಹಳ್ಳಿಯನ ಸ್ಲಂಬೋರ್ಡ್‌ ಮನೆಯಲ್ಲಿ ವಾಸವಾಗಿದ್ದುಕೊಂಡು ಸ್ಥಳೀಯರಿಗೆ ಬೆದರಿಕೆ ಹಾಕಿ, ಹಣ ವಸೂಲು ಮಾಡುತ್ತಿದ್ದ.

ಸ್ಥಳಕ್ಕೆ ತೆರಳಿದ್ದ ಸಿಸಿಬಿ ಪೊಲೀಸರ ಮೇಲೆ ಏರುಧ್ವನಿಯಲ್ಲಿ ಮಾತನಾಡಿ, ಬೆದರಿಕೆ ಹಾಕಿ, ಕಲ್ಲಿನಿಂದ ಹಲ್ಲೆಗೆ ಯತ್ನ ನಡೆಸಿದ್ದ. ಆರೋಪಿ ವಿರುದ್ಧ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆಗೆ ಯತ್ನ, ಸುಲಿಗೆ, ದರೋಡೆ, ಕಳ್ಳತನ ಸೇರಿ ಒಟ್ಟು ಹದಿನೈದಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.