
ಪ್ರಜಾವಾಣಿ ವಾರ್ತೆಪ್ರಾತಿನಿಧಿಕ ಚಿತ್ರ
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಸಿಐಡಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಅಜಿತ್ ಬಂಧಿತ ಆರೋಪಿ.
ತಲೆಮರೆಸಿಕೊಂಡಿದ್ದ ಅಜಿತ್, ಸೋಮವಾರ ಬೆಳಿಗ್ಗೆ ರಾಮಮೂರ್ತಿನಗರದಲ್ಲಿ ಇರುವ ಮಾಹಿತಿ ಸಿಕ್ಕಿತ್ತು. ಅಲ್ಲಿಗೆ ತೆರಳಿದ ತನಿಖಾ ತಂಡವು ಆರೋಪಿಯನ್ನು ಬಂಧಿಸಿದೆ ಎಂದು ಸಿಐಡಿ ಮೂಲಗಳು ಹೇಳಿವೆ.
ಭಾರತೀನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜುಲೈ 15ರಂದು ಬಿಕ್ಲು ಶಿವು ಅವರ ಕೊಲೆ ನಡೆದಿತ್ತು. ಈ ಪ್ರಕರಣದಲ್ಲಿ ಇದುವರೆಗೂ 19 ಆರೋಪಿಗಳನ್ನು ಬಂಧಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.