ADVERTISEMENT

ಬಿಕ್ಲು ಶಿವು ಕೊಲೆ: ಠಾಣೆಗೆ ಹಾಜರಾಗಲು ಬೈರತಿ ಬಸವರಾಜ್‌ಗೆ ಹೈಕೋರ್ಟ್ ತಾಕೀತು

​ಪ್ರಜಾವಾಣಿ ವಾರ್ತೆ
Published 19 ಜುಲೈ 2025, 2:43 IST
Last Updated 19 ಜುಲೈ 2025, 2:43 IST
<div class="paragraphs"><p>ಬೈರತಿ ಬಸವರಾಜ್,&nbsp;&nbsp;ಬಿಕ್ಲು ಶಿವ</p></div>

ಬೈರತಿ ಬಸವರಾಜ್,  ಬಿಕ್ಲು ಶಿವ

   

ಬೆಂಗಳೂರು: ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಶನಿವಾರ (ಜುಲೈ 19) ಬೆಳಿಗ್ಗೆ 11.30ಕ್ಕೆ ಭಾರತಿ ನಗರ ಪೊಲೀಸ್‌ ಠಾಣೆಗೆ ಹಾಜರಾಗಿ’ ಎಂದು ಕೆ.ಆರ್‌.ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್‌ ಅವರಿಗೆ ಹೈಕೋರ್ಟ್‌ ನಿರ್ದೇಶಿಸಿದೆ.

‘ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ಭಾರತಿ ನಗರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸಬೇಕು’ ಎಂದು ಕೋರಿ ಬೈರತಿ ಬಸವರಾಜ್‌ ಸಲ್ಲಿಸಿರುವ ಕ್ರಿಮಿನಲ್‌ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌.ಆರ್‌.ಕೃಷ್ಣ ಕುಮಾರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಸಂಜೆ ವಿಚಾರಣೆ ನಡೆಸಿತು.

ADVERTISEMENT

‘ಬಸವರಾಜ್‌ ವಿಚಾರಣೆಗೆ ಹಾಜರಾದರೆ ಭಾರತೀಯ ನ್ಯಾಯ ಸಂಹಿತೆ–2023ರ ಕಲಂ (3)(4)(5) ಮತ್ತು ಅರ್ನೇಶ್‌ ಕುಮಾರ್‌, ಗೋಸ್ವಾಮಿ ಪ್ರಕರಣದಲ್ಲಿ ಸುಪ್ರಿಂ ಕೋರ್ಟ್‌ ನೀಡಿರುವ ತೀರ್ಪಿನ ನಿದೇಶನಗಳನ್ನು ಪಾಲಿಸಬೇಕು’ ಎಂದು ಆದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಇದೇ 23ಕ್ಕೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.