ಪೀಣ್ಯ ದಾಸರಹಳ್ಳಿ: ಚಿಕ್ಕಬಾಣಾವರದ ಮಾರುತಿನಗರದ ಬಾರ್ ಎದುರು ಶುಕ್ರವಾರ ತಡರಾತ್ರಿ ನಡೆದ ಗಲಾಟೆಯಲ್ಲಿ ರೌಡಿಶೀಟರ್ ಪ್ರತಾಪ್ (27) ಅವರನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.
ಕೊಲೆ ಪ್ರಕರಣದ ಸಂಬಂಧ ಅಕ್ಷಯ್, ತೇಜಸ್, ಲಿಖಿತ್ ಎಂಬುವವರನ್ನು ಸೋಲದೇವನಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
‘ಹೆಸರಘಟ್ಟ ಮುಖ್ಯರಸ್ತೆಯಲ್ಲಿರುವ ಗುರು ಕೃಪಾ ಬಾರ್ ಅನ್ನು ಶುಕ್ರವಾರ ರಾತ್ರಿ 11ರ ಸುಮಾರಿಗೆ ಸಿಬ್ಬಂದಿ ಬಂದ್ ಮಾಡಿದ್ದರು. ಬಂದ್ ಆಗಿದ್ದ ಬಾರ್ ಎದುರು ಪ್ರತಾಪ್ ನಿಂತಿದ್ದರು. ಸ್ಥಳಕ್ಕೆ ಬಂದಿದ್ದ ಆರೋಪಿಗಳು, ಮದ್ಯ ಬೇಕೆಂದು ವಿಚಾರಿಸಿದ್ದರು. ಬಾರ್ ಬಂದ್ ಆಗಿದ್ದು, ಸ್ಥಳದಿಂದ ಹೋಗುವಂತೆ ಆರೋಪಿಗಳಿಗೆ ಪ್ರತಾಪ್ ಸೂಚಿಸಿದ್ದರು. ಆ ವೇಳೆ ಮಾತಿಗೆ ಮಾತು ಬೆಳೆದು ಎರಡು ಗುಂಪುಗಳ ಮಧ್ಯೆ ಗಲಾಟೆ ಆಗಿತ್ತು’ ಎಂದು ಪೊಲೀಸರು ಹೇಳಿದರು.
‘ಸ್ಥಳದಿಂದ ಆರೋಪಿಗಳು ಕೆಬ್ಬೆಪಾಳ್ಯದ ಮನೆಗೆ ತೆರಳಿದ್ದರು. ಸ್ವಲ್ಪ ಸಮಯದ ಬಳಿಕ ಡ್ರಾಗರ್ ಹಿಡಿದು ಸ್ಥಳಕ್ಕೆ ಆರೋಪಿಗಳು ಬಂದಿದ್ದರು. ಅಷ್ಟರಲ್ಲಿ ಪ್ರತಾಪ್ ಅವರು ಬೈಕ್‌ನಲ್ಲಿ ಮನೆಯತ್ತ ತೆರಳುತ್ತಿದ್ದರು. ಬೈಕ್ ಅನ್ನು ಅಡ್ಡಗಟ್ಟಿ, ಪ್ರತಾಪ್ ಅವರ ಹೊಟ್ಟೆಯ ಭಾಗಕ್ಕೆ ಚುಚ್ಚಿದ್ದರು. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಹೊಯ್ಸಳ ಸಿಬ್ಬಂದಿ ಪ್ರತಾಪ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಯಲ್ಲಿ ಪ್ರತಾಪ್ ಮೃತಪಟ್ಟಿದ್ದಾರೆ’ ಎಂದು ಮೂಲಗಳು ತಿಳಿಸಿವೆ.
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದವರಿಗೆ ಹಸ್ತಾಂತರ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.