ಬೆಂಗಳೂರು: ರೌಡಿಶೀಟರ್ ವಿಜಯ್ ಎಂಬಾತನ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಮತ್ತಿಬ್ಬರು ಆರೋಪಿಗಳನ್ನು ಜೆ.ಜೆ.ನಗರ ಪೊಲೀಸರು ಬಂಧಿಸಿದ್ದಾರೆ.
ಸಂತೋಷ್ ಮತ್ತು ಅಪ್ಪ ಅಲಿಯಾಸ್ ಅಣ್ಣಿ ಸೆರೆಯಾದ ಆರೋಪಿಗಳು.
ನಗರದ ಜನತಾ ಕಾಲೊನಿಯಲ್ಲಿ ಜೂನ್ 14ರ ರಾತ್ರಿ ವಿಜಯ್ (26) ಎಂಬ ರೌಡಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು, ಕಾರ್ಯಾಚರಣೆ ವೇಳೆ ನಾಲ್ವರು ಆರೋಪಿಗಳು ಪೊಲೀಸರ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆಗೆ ಮುಂದಾಗಿದ್ದರು. ಈ ವೇಳೆ ಪರಾರಿಯಾಗುತ್ತಿದ್ದ ಇಬ್ಬರ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದರು.
ಬಂಧಿತ ಅರುಣ್ ಹಾಗೂ ದೀಪು ಹೇಳಿಕೆ ಆಧರಿಸಿ ಇನ್ನಿಬ್ಬರನ್ನು ಬಂಧಿಸಲಾಗಿದೆ. ದಾಳಿ ವೇಳೆ ಜೆ.ಜೆ.ನಗರ ಠಾಣೆ ಎಎಸ್‌ಐ ಕುಮಾರ್ ಮತ್ತು ಕಾನ್‌ಸ್ಟೆಬಲ್ ಕರೀಂ ಸಾಬ್ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.