
ಎಸ್.ಟಿ.ಸೋಮಶೇಖರ್
ರಾಜರಾಜೇಶ್ವರಿ ನಗರ: ಮುಖ್ಯರಸ್ತೆ ಕಾಮಗಾರಿ ಸ್ಥಗಿತಗೊಂಡಿರುವುದರಿಂದ ಆಗುತ್ತಿರುವ ಸಮಸ್ಯೆ ಬಗೆಹರಿಯದಿದ್ದರೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಗುವುದು ಎಂದು ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಎಚ್ಚರಿಸಿದ್ದಾರೆ.
ಉತ್ತರಹಳ್ಳಿ ಮುಖ್ಯರಸ್ತೆಯಿಂದ ಕೋಡಿಪಾಳ್ಯ ಮುಖ್ಯ ರಸ್ತೆ, ಕನಕಪುರ ಮುಖ್ಯರಸ್ತೆಯ ಹಾಲಿಡೇ ವಿಲೇಜ್ ರಸ್ತೆಯಲ್ಲಿ ನಡೆಯುತ್ತಿರುವ ವೈಟ್ ಟಾಪಿಂಗ್ ಕಾಮಗಾರಿಯನ್ನು ಗುತ್ತಿಗೆದಾರರು ಸ್ಥಗಿತಗೊಳಿಸಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಕಾಮಗಾರಿ ಕೂಡಲೇ ಪುನರಾರಂಭಿಸಿ ಬೇಗನೇ ಮುಗಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಿಬಿಎ ಮುಖ್ಯ ಆಯುಕ್ತರಿಗೆ ಪತ್ರ ಬರೆದು ಎಚ್ಚರಿಕೆ ನೀಡಿದ್ದಾರೆ.
ಈ ರಸ್ತೆಯಲ್ಲಿ ಅನೇಕ ಅಪಾರ್ಟ್‌ಮೆಂಟ್‌ಗಳು, ಶಾಲೆಗಳು ಇವೆ. ವೈಟ್ ಟಾಪಿಂಗ್‌ಗೆ ಅನುದಾನ ಬಿಡುಗಡೆಯಾಗಿದೆ. ಕಾರ್ಯಾದೇಶವಾಗಿ ವರ್ಷವೇ ಕಳೆದಿದ್ದರೂ, ಇದುವರೆಗೂ ಕಾಮಗಾರಿ ಕುಂಟುತ್ತಾ ಸಾಗಿದೆ ಎಂದು ಆರೋಪಿಸಿದ್ದಾರೆ.
ಹಲವು ಬಾರಿ ಮುಖ್ಯ ಆಯುಕ್ತರ ಗಮನಕ್ಕೆ ತಂದರೂ ಸಮಸ್ಯೆ ಬಗೆಹರಿದಿಲ್ಲ. ಸ್ಥಳ ಪರಿಶೀಲನೆ ಮಾಡಿ ಸಮಸ್ಯೆ ಬಗೆಹರಿಸುವುದಾಗಿ ಆಶ್ವಾಸನೆ ನೀಡಿದರೂ ಕೆಲಸ ಶುರುವಾಗುತ್ತಿಲ್ಲ. ವಿಧಾನಮಂಡಲ ಅಧಿವೇಶನದಲ್ಲಿ ಈ ಬಗ್ಗೆ ಚರ್ಚಿಸಿ ಗುತ್ತಿಗೆದಾರರ ಗಮನಕ್ಕೆ ತಂದರೂ ಕಾಮಗಾರಿ ಸ್ಥಗಿತಗೊಳಿಸಿ ತಮಾಷೆ ನೋಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.