ADVERTISEMENT

ಬೆಂಗಳೂರು | ₹24 ಕೋಟಿ ಮೌಲ್ಯದ ನಿಷೇಧಿತ ಮಾದಕ ವಸ್ತು MDMA ಜಪ್ತಿ ಮಾಡಿದ CCB

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2024, 7:22 IST
Last Updated 17 ಡಿಸೆಂಬರ್ 2024, 7:22 IST
<div class="paragraphs"><p>ಬಂಧಿತ&nbsp;ನೈಜೀರಿಯಾ ಮೂಲದ ಮಹಿಳೆ</p></div>

ಬಂಧಿತ ನೈಜೀರಿಯಾ ಮೂಲದ ಮಹಿಳೆ

   

ಬೆಂಗಳೂರು: ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಮಾದಕ ದ್ರವ್ಯ ನಿಗ್ರಹ ದಳ ಹಾಗೂ ಕೆ.ಆರ್‌.ಪುರ ಪೊಲೀಸರು ಕಾರ್ಯಾಚರಣೆ ನಡೆಸಿ, ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ 40 ವರ್ಷದ ಮಹಿಳೆಯನ್ನು ಬಂಧಿಸಿ ₹24 ಕೋಟಿ ಮೌಲ್ಯದ ಮಾದಕವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.

‘ಬಂಧಿತ ಮಹಿಳೆಯಿಂದ 12 ಕೆ.ಜಿ ಎಂಡಿಎಂಎ ಕ್ರಿಸ್ಟಲ್, ಒಂದು ಮೊಬೈಲ್, 70 ಏರ್‌ಟೇಲ್ ಸಿಮ್‌ ಕಾರ್ಡ್‌ಗಳನ್ನು ಜಪ್ತಿ ಮಾಡಲಾಗಿದೆ. ಇವುಗಳ ಮೌಲ್ಯ ₹24 ಕೋಟಿ ಎಂದು ಅಂದಾಜಿಸಲಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ.

ADVERTISEMENT

‘ಬೆಂಗಳೂರಿನ ಟಿ.ಸಿ. ಪಾಳ್ಯದಲ್ಲಿ ತಂಗಿದ್ದ ಶಂಕಿತ ಮಹಿಳೆಯ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ’ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ. ದಯಾನಂದ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಈವರೆಗೆ ನಡೆಸಿದ ಅತಿದೊಡ್ಡ ಡ್ರಗ್ಸ್‌ ಕಾರ್ಯಾಚರಣೆ ಇದಾಗಿದೆ. ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಮತ್ತೋರ್ವ ವಿದೇಶಿ ಮಹಿಳೆಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.