ADVERTISEMENT

ಪಾತ್ರೆಗಳಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ ₹ 9.23 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2022, 21:37 IST
Last Updated 19 ಮಾರ್ಚ್ 2022, 21:37 IST
ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿರುವ ಡ್ರಗ್ಸ್ ಹಾಗೂ ಪಾತ್ರೆಗಳು
ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿರುವ ಡ್ರಗ್ಸ್ ಹಾಗೂ ಪಾತ್ರೆಗಳು   

ಬೆಂಗಳೂರು: ಅಡುಗೆ ಪಾತ್ರೆಗಳಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ ₹ 9.23 ಕೋಟಿ ಮೌಲ್ಯದ ಮಾದಕ ವಸ್ತುವನ್ನು (ಡ್ರಗ್ಸ್) ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

‘ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಕೋರಿಯರ್‌ನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಬಗ್ಗೆ ಇಂಟೆಲಿಜೆನ್ಸ್ ವಿಭಾಗದಿಂದ ಮಾಹಿತಿ ಬಂದಿತ್ತು. ನಿಲ್ದಾಣದ ಸರಕು ವಿಭಾಗದಲ್ಲಿ ಪರಿಶೀಲನೆ ನಡೆಸಿದಾಗ 46 ಕೆ.ಜಿ 799 ಗ್ರಾಂ ಎಫೆಡ್ರೈನ್ ಡ್ರಗ್ಸ್ ಪತ್ತೆಯಾಯಿತು’ ಎಂದು ಕಸ್ಟಮ್ಸ್ ಮೂಲಗಳು ಹೇಳಿವೆ.

‘ಚೆನ್ನೈನಿಂದ ಆಸ್ಟ್ರೇಲಿಯಾಕ್ಕೆ ಅಡುಗೆ ಪಾತ್ರೆಗಳನ್ನು ಕೋರಿಯರ್ ಮೂಲಕ ಕಳುಹಿಸಲಾಗುತ್ತಿತ್ತು. ಅದೇ ಕೋರಿಯರ್ ಮೇಲೆ ಅನುಮಾನ ಬಂದಿತ್ತು. ಪಾತ್ರೆಗಳನ್ನು ಹೊರತೆಗೆದು, ಪರಿಶೀಲನೆ ನಡೆಸಿದಾಗ ಡ್ರಗ್ಸ್ ಪೊಟ್ಟಣಗಳು ಸಿಕ್ಕವು’ ಎಂದೂ ತಿಳಿಸಿವೆ.

ADVERTISEMENT

‘ಡ್ರಗ್ಸ್ ಸಾಗಣೆ ಬಗ್ಗೆ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಯಾರು ಯಾರಿಗೆ ಡ್ರಗ್ಸ್ ಕಳುಹಿಸುತ್ತಿದ್ದರೆಂಬ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ’ ಎಂದೂ ಕಸ್ಟಮ್ಸ್ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.