ADVERTISEMENT

ಅಲ್ಪಸಂಖ್ಯಾತರ ಮತಕ್ಕಾಗಿ ಆರ್‌ಎಸ್‌ಎಸ್‌ ಟೀಕೆ: ಸಚಿವ ಆರಗ ಜ್ಞಾನೇಂದ್ರ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2021, 19:44 IST
Last Updated 16 ಅಕ್ಟೋಬರ್ 2021, 19:44 IST
ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ   

ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್‌.ಡಿ. ಕುಮಾರಸ್ವಾಮಿ ಅಲ್ಪಸಂಖ್ಯಾತರ ಮತಗಳಿಗಾಗಿ ಹಲ್ಲು ಗಿಂಜುತ್ತಿದ್ದಾರೆ. ಅದೇ ಉದ್ದೇಶದಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ಟೀಕೆ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಚೇರಿ ಜಗನ್ನಾಥ ಭವನದಲ್ಲಿ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಅವರನ್ನು ಭಾನುವಾರ ಭೇಟಿ ಮಾಡಿದ ಬಳಿಕ ಸುದ್ದಿಗಾರರ ಜತೆ ಅವರು ಮಾತನಾಡಿದರು.

‘ಅಲ್ಪಸಂಖ್ಯಾತರ ಮತ ಪಡೆಯಲು ಮಾಜಿ ಮುಖ್ಯಮಂತ್ರಿಗಳಿಬ್ಬರೂಸ್ಪರ್ಧೆಗಿಳಿದಿದ್ದಾರೆ. ಅವರಿಬ್ಬರ ಉದ್ದೇಶ ಎಲ್ಲರಿಗೂ ಗೊತ್ತಿದೆ. ಆರ್‌ಎಸ್‌ಎಸ್‌ ಜಗತ್ತಿನ ಅತಿದೊಡ್ಡ ಸ್ವಯಂಸೇವಾ ಸಂಘಟನೆ. ಇದು ಅವರಿಗೂ ಗೊತ್ತು. ಆದರೆ, ಮತಕ್ಕಾಗಿ ಟೀಕಿಸುತ್ತಿದ್ದಾರೆ’ ಎಂದು ಆರಗ ಜ್ಞಾನೇಂದ್ರ ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.