ಎಫ್‌ಐಆರ್
ಬೆಂಗಳೂರು: ಆರ್‌ಎಸ್‌ಎಸ್ ರಾಜ್ಯ ಪ್ರಧಾನ ಕಚೇರಿಗೆ ನುಗ್ಗಿ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿ, ಪ್ರಾಣ ಬೆದರಿಕೆ ಹಾಕಿದ್ದ ಆರೋಪದಡಿ ಎನ್‌ಎಸ್‌ಯುಐನ ರಾಜ್ಯ ಘಟಕದ ಅಧ್ಯಕ್ಷರೂ ಸೇರಿ 20 ಮಂದಿ ವಿರುದ್ಧ ಶಂಕರಪುರ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ.
ಕೇಶವಕೃಪಾದ ಕಾರ್ಯದರ್ಶಿ ಶ್ರೀನಿಧಿ ಅವರು ನೀಡಿದ ದೂರಿನ ಮೇರೆಗೆ ಎನ್‌ಎಸ್‌ಐಯು ರಾಜ್ಯ ಘಟಕದ ಅಧ್ಯಕ್ಷ ಕಾರ್ತಿಕ್ ಹಾಗೂ ಇತರೆ 19 ಮಂದಿ ವಿರುದ್ಧ ಅಕ್ರಮ ಪ್ರವೇಶ, ಹಲ್ಲೆ ಮತ್ತು ಪ್ರಾಣ ಬೆದರಿಕೆ ಆರೋಪದ ಅಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಶಂಕರಪುರದಲ್ಲಿ ಇರುವ ಆರ್‌ಎಸ್‌ಎಸ್‌ನ ರಾಜ್ಯ ಪ್ರಧಾನ ಕಚೇರಿ ಕೇಶವಕೃಪಾಗೆ ಶುಕ್ರವಾರ ಗುಂಪೊಂದು ನುಗ್ಗಿ, ಅಲ್ಲಿನ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿ ಜತೆಗೆ ಪ್ರಾಣ ಬೆದರಿಕೆ ಹಾಕಿದೆ ಎಂದು ದೂರು ನೀಡಲಾಗಿತ್ತು. ಆ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.