ADVERTISEMENT

ರೈತ ಸಂಘಕ್ಕೆ ಆರ್‌ಎಸ್‌ಎಸ್‌ ಮಾದರಿಯಾಗಲಿ: ಎಚ್‌.ಆರ್. ಬಸವರಾಜಪ್ಪ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2019, 19:48 IST
Last Updated 26 ಏಪ್ರಿಲ್ 2019, 19:48 IST
ರೈತ ಕಾರ್ಯಾಗಾರದಲ್ಲಿ ಕೃಷಿ ವಿಶ್ವವಿದ್ಯಾಲಯದ ಕುಲಪತಿ ರಾಜೇಂದ್ರ ಪ್ರಸಾದ್ ಮತ್ತು ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸಮಾಲೋಚನೆಯಲ್ಲಿ ತೊಡಗಿದ್ದರು. ರೈತ ಮುಖಂಡ ಎಚ್.ಆರ್.ಬಸವರಾಜಪ್ಪ, ಅನುಸೂಯಮ್ಮ ಇದ್ದಾರೆ             –ಪ್ರಜಾವಾಣಿ ಚಿತ್ರ
ರೈತ ಕಾರ್ಯಾಗಾರದಲ್ಲಿ ಕೃಷಿ ವಿಶ್ವವಿದ್ಯಾಲಯದ ಕುಲಪತಿ ರಾಜೇಂದ್ರ ಪ್ರಸಾದ್ ಮತ್ತು ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸಮಾಲೋಚನೆಯಲ್ಲಿ ತೊಡಗಿದ್ದರು. ರೈತ ಮುಖಂಡ ಎಚ್.ಆರ್.ಬಸವರಾಜಪ್ಪ, ಅನುಸೂಯಮ್ಮ ಇದ್ದಾರೆ             –ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ರೈತ ಸಂಘಟನೆಗಳಿಗೆ ಆರ್‌ಎಸ್‌ಎಸ್‌ ಮಾದರಿಯಾಗಬೇಕು’ ಎಂದು ರೈತ ಮುಖಂಡ ಎಚ್‌.ಆರ್. ಬಸವರಾಜಪ್ಪ ಅಭಿಪ್ರಾಯಪಟ್ಟರು.

ಹೆಬ್ಬಾಳದ ಪಶುವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿನ ರೈತ ಭವನದಲ್ಲಿ ರಾಜ್ಯ ರೈತ ಸಂಘ ಶುಕ್ರವಾರ ಆಯೋಜಿಸಿದ್ದ ಮೂರು ದಿನಗಳ ರೈತ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಸಂಘಟನೆಗಾಗಿ ಜೀವನಪೂರ್ತಿ ಯಾವುದೇ ಪ್ರತಿಫಲ ಆಪೇಕ್ಷಿಸದೆ ಕಾರ್ಯನಿರ್ವಹಿಸುವವರು ಆರ್‌ಎಸ್‌ಎಸ್‌ನಲ್ಲಿ ಇದ್ದಾರೆ. ಹೀಗಾಗಿಯೇ ಆರ್‌ಎಸ್‌ಎಸ್ ಮಾತಿಗೆ ಬಿಜೆಪಿಯಲ್ಲಿ ಮಾನ್ಯತೆ ಇದೆ. ಇದೇ ರೀತಿ ರೈತ ಸಂಘಟನೆಗಳು ತಮ್ಮ ಕಾರ್ಯವೈಖರಿ ಬದಲಿಸಿಕೊಳ್ಳಬೇಕು ಎಂದು ತಿಳಿಸಿದರು.

ADVERTISEMENT

ಬೆಂಗಳೂರು ಕೃಷಿ ವಿವಿ ಕುಲಪತಿ ಡಾ.ಎಸ್.ರಾಜೇಂದ್ರಪ್ರಸಾದ್ ಮಾತನಾಡಿ, ರೈತ ಸಂಘಟನೆಗಳ ಕಾರ್ಯಕರ್ತರು ಕೇವಲ ಹೋರಾಟಕ್ಕೆ ಸೀಮಿತವಾಗದೆ ಸರ್ಕಾರದ ಯೋಜನೆಗಳನ್ನು ರೈತರಿಗೆ ತಲುಪಿಸಲು ಸಹಕರಿಸಬೇಕು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.