ADVERTISEMENT

ಆರ್‌ಟಿಇ: ವಿಚಾರಣೆ ಇಂದು

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2020, 21:24 IST
Last Updated 21 ಸೆಪ್ಟೆಂಬರ್ 2020, 21:24 IST

ಬೆಂಗಳೂರು: ಎಚ್‌.ಡಿ. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಆರ್‌ಟಿಇ ನಿಯಮ 4ಕ್ಕೆ ತಂದಿದ್ದ ತಿದ್ದುಪಡಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ವಿಶೇಷ ಮೇಲ್ಮನವಿ ಅರ್ಜಿಯ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಮಂಗಳವಾರ(ಸೆ. 22) ನಡೆಯಲಿದೆ.

ಮಕ್ಕಳು ವಾಸಿಸುವ ಪ್ರದೇಶದ ವ್ಯಾಪ್ತಿಯಲ್ಲಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿದ್ದರೆ ಅನುದಾನರಹಿತ (ಖಾಸಗಿ) ಶಾಲೆಗಳನ್ನು ಆರ್‌ಟಿಇ ಅಡಿ ಗುರುತಿಸಲು ಅವಕಾಶ ಇಲ್ಲ ಎಂಬ ನಿಯಮ 4ಕ್ಕೆ ತಂದಿದ್ದ ತಿದ್ದುಪಡಿಯನ್ನು ಪ್ರಶ್ನಿಸಿ ಆರ್‌ಟಿಇ ವಿದ್ಯಾರ್ಥಿಗಳು ಮತ್ತು ಪೋಷಕರ ಸಂಘ ಮತ್ತು ಇತರರು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಜಾಗೊಳಿಸಿದ್ದ ಹೈಕೋರ್ಟ್‌, ಸರ್ಕಾರ ತಂದಿದ್ದ ತಿದ್ದುಪಡಿಯನ್ನು ಎತ್ತಿ ಹಿಡಿದಿತ್ತು.‌ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT