ADVERTISEMENT

ಬಿಬಿಎಂಪಿ ವಾರ್ಡ್‌ ರಚನೆ ಪ್ರಶ್ನಿಸಿ ರಿಟ್‌ ಅರ್ಜಿ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2022, 5:22 IST
Last Updated 9 ಆಗಸ್ಟ್ 2022, 5:22 IST
   

ಬೆಂಗಳೂರು: ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಾರ್ಡ್‌ಗಳನ್ನು ರಚಿಸಿ 2022ರ ಜುಲೈ 14ರಂದು ಹೊರಡಿಸಿರುವ ಅಧಿಸೂಚನೆ ರದ್ದುಪಡಿಸಿ ಹೊಸದಾಗಿ ವಾರ್ಡ್‌ಗಳನ್ನು ರಚಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

ಈ ಸಂಬಂಧ ವಕೀಲ ಎಸ್. ಇಸ್ಮಾಯಿಲ್ ಜಬೀವುಲ್ಲಾ ಅವರು ಸಲ್ಲಿಸಿರುವ ಈ ರಿಟ್‌ ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಅರ್ಜಿಯಲ್ಲಿ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಬೆಂಗಳೂರು ನಗರ ಜಿಲ್ಲಾಧಿಕಾರಿ, ಸೀಮಾ ನಿರ್ಣಯ ಆಯೋಗದಅಧ್ಯಕ್ಷ, ಬಿಬಿಎಂಪಿ ಮುಖ್ಯ ಆಯುಕ್ತ ಹಾಗೂ ರಾಜ್ಯ ಚುನಾವಣಾ ಆಯೋಗವನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ವಾರ್ಡ್‌ಗಳ ಕರಡು ಪುನರ್‌ ವಿಂಗಡಣೆಯನ್ನು 2022ರ ಜೂನ್‌ 23ರಂದು ಪ್ರಕಟಿಸಲಾಗಿತ್ತು. ಅರ್ಜಿದಾರರು ಜುಲೈ 7ರಂದು ಇದಕ್ಕೆ ಆಕ್ಷೇಪಣೆ ಸಲ್ಲಿಸಿದ್ದರು. ಸರ್ಕಾರ ಮನವಿಯನ್ನು ಪರಿಗಣಿಸಿದ ಕಾರಣ ಅರ್ಜಿದಾರರು ಸುಪ್ರೀಂ ಕೋರ್ಟ್‌ ಮೊರೆಹೋಗಿದ್ದರು. ವಿವಾದವನ್ನು ಹೈಕೋರ್ಟ್‌ನಲ್ಲೇ ಬಗೆಹರಿಸಿಕೊಳ್ಳುವಂತೆ ಸುಪ್ರೀಂಕೋರ್ಟ್ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಅರ್ಜಿದಾರರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.