ನೆಲಮಂಗಲ: ‘ಮಹಿಳಾ ಅಧಿಕಾರಿಯೊಂದಿಗೆ ಅಸಭ್ಯ ವರ್ತನೆ ತೋರಿದ್ದಾರೆ’ ಎಂಬ ಆರೋಪದಡಿ ನೆಲಮಂಗಲ ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಜಕುಮಾರ್ ಅವರ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಸಾರಿಗೆ ನಿರೀಕ್ಷಕಿಯೊಬ್ಬರು ಕರ್ತವ್ಯಕ್ಕೆ ಜಾಕೆಟ್ ಹಾಕಿಕೊಂಡು ಬಂದಿದ್ದರು. ಜಾಕೆಟ್ ತೆಗೆಯಿರಿ ಎಂದು ಅಧಿಕಾರಿ ರಾಜಕುಮಾರ್ ಅವರು ಹೇಳಿ ಅಸಭ್ಯ ವರ್ತನೆ ತೋರಿದ್ದಾರೆ’ ಎಂದು ದೂರು ನೀಡಲಾಗಿದೆ.
ಮಹಿಳಾ ಅಧಿಕಾರಿ ನೀಡಿದ ದೂರು ಆಧರಿಸಿ ಮಾದನಾಯಕನಹಳ್ಳಿ ಪೊಲೀಸರು ಬಿಎನ್ಎಸ್ 75ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ರಾಜಕುಮಾರ್ ಅವರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.