ಸಾಂದರ್ಭಿಕ ಚಿತ್ರ
ಬೆಂಗಳೂರು: ಎಚ್‌ಎಎಲ್ ಬಳಿ ಮದ್ಯದ ನಶೆಯಲ್ಲಿ ಪುಂಡರ ಗುಂಪೊಂದು ಪಾದಚಾರಿ ಮಾರ್ಗದ ಮೇಲೆ ಕಾರು ಹತ್ತಿಸಿ, ಶಾಲಾ ವಿದ್ಯಾರ್ಥಿನಿಯರ ಜತೆಗೆ ಅಸಭ್ಯ ವರ್ತನೆ ತೋರಿದೆ.
ಎಚ್‌ಎಎಲ್‌ನ ಖಾಸಗಿ ಶಾಲೆಯೊಂದರ ಸಮೀಪದ ರಸ್ತೆಯಲ್ಲಿ ಇನ್ನೊವಾ ಕಾರಿನಲ್ಲಿ ಯುವಕರು ಬಂದಿದ್ದರು. ಇದೇ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಯರ ಬಳಿ ಕಾರನ್ನು ನಿಲ್ಲಿಸಿದ್ದರು. ನಂತರ, ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ.
ಇದನ್ನು ಪ್ರಶ್ನಿಸಿದ್ದ ಸ್ಥಳೀಯರ ಮೇಲೆ ಮೂವರು ಯುವಕರು ಹಲ್ಲೆ ನಡೆಸಿದ್ದಾರೆ. ನಂತರ, ವಿದ್ಯಾರ್ಥಿನಿಯರಿಗೆ ಹೆದರಿಸಲು ಯತ್ನಿಸಿದ್ದರು. ಸ್ಥಳೀಯರು ಪೊಲೀಸ್ ಸಹಾಯವಾಣಿಗೆ ಮಾಹಿತಿ ನೀಡಿದ್ದರು. ಕೂಡಲೇ ಸ್ಥಳಕ್ಕೆ ಪೊಲೀಸ್ ವಾಹನ ಬಂದಿದ್ದು, ಅಷ್ಟರಲ್ಲಿ ಪುಂಡರ ಗುಂಪು ಅಲ್ಲಿಂದ ತೆರಳಿತ್ತು ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.