ADVERTISEMENT

ಉಪ ಸಭಾಧ್ಯಕ್ಷರಾಗಿ ರುದ್ರಪ್ಪ ಲಮಾಣಿ ಅವಿರೋಧ ಆಯ್ಕೆ

​ಪ್ರಜಾವಾಣಿ ವಾರ್ತೆ
Published 6 ಜುಲೈ 2023, 9:17 IST
Last Updated 6 ಜುಲೈ 2023, 9:17 IST
   

ಬೆಂಗಳೂರು: ವಿಧಾನಸಭೆಯ ನೂತನ ಉಪ ಸಭಾಧ್ಯಕ್ಷರಾಗಿ ಹಾವೇರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ರುದ್ರಪ್ಪ ಮಾನಪ್ಪ ಲಮಾಣಿ ಗುರುವಾರ ಅವಿರೋಧವಾಗಿ ಆಯ್ಕೆಯಾದರು.

ಉಪ‌ ಸಭಾಧ್ಯಕ್ಷರ ಆಯ್ಕೆಯ ಚುನಾವಣೆಯಲ್ಲಿ ರುದ್ರಪ್ಪ ಲಮಾಣಿ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಸರ್ಕಾರದ ಮುಖ್ಯ ಸಚೇತಕ ಅಶೋಕ್ ಎಂ. ಪಟ್ಟಣ ಲಮಾಣಿ ಅವರ ಹೆಸರನ್ನು ಸೂಚಿಸಿದರೆ, ಕಾಂಗ್ರೆಸ್ ಸದಸ್ಯ ಬಸವರಾಜ ನೀಲಪ್ಪ ಶಿವಣ್ಣವರ್ ಅನುಮೋದಿಸಿದರು. ಬಳಿಕ ಪ್ರಸ್ತಾವವನ್ನು ಧ್ವನಿಮತದ ಮೂಲಕ ಅಂಗೀಕರಿಸಲಾಯಿತು.

ರುದ್ರಪ್ಪ ಲಮಾಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.