ADVERTISEMENT

‘ರನ್ 4 ನಮೋ’ ಓಟಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2024, 19:40 IST
Last Updated 14 ಏಪ್ರಿಲ್ 2024, 19:40 IST
<div class="paragraphs"><p>ಪ್ರಧಾನಿ ನರೇಂದ್ರ ಮೋದಿ</p></div>

ಪ್ರಧಾನಿ ನರೇಂದ್ರ ಮೋದಿ

   

ಪಿಟಿಐ ಚಿತ್ರ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಂಬಲಿಸಿ ಜಯನಗರದ ಜಾಗ್ವಾರ್ಸ್ ತಂಡ, ಭಾನುವಾರ ಆಯೋಜಿಸಿದ್ದ ‘ರನ್ 4 ನಮೊ’ ಓಟಕ್ಕೆ ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ, ಬ್ಯಾಡ್ಮಿಂಟನ್ ಕ್ರೀಡಾಪಟು ರೋಹನ್‌ ಬೋಪಣ್ಣ ಅವರು ಚಾಲನೆ ನೀಡಿದರು.

ADVERTISEMENT

ಆರ್‌ವಿ ಟೀಚರ್ಸ್‌ ಕಾಲೇಜಿನಿಂದ ಬೆಳಿಗ್ಗೆ 6.30ಕ್ಕೆ ಪ್ರಾರಂಭವಾದ ಓಟ, ಮಯ್ಯಾಸ್‌ ಹೋಟೆಲ್ ಜಂಕ್ಷನ್, ಯಡಿಯೂರು ಕೆರೆ ಮೂಲಕ ಹಾದು ಲಾಲ್‌ಬಾಗ್ ಪಶ್ಚಿಮ ದ್ವಾರದಲ್ಲಿ ಮುಕ್ತಾಯಗೊಂಡಿತು.

ತೇಜಸ್ವಿ ಸೂರ್ಯ ಮಾತನಾಡಿ, ‘ಮತದಾನದ ಶೇಕಡವಾರು ಪ್ರಮಾಣ ಹೆಚ್ಚಾಗಲು ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸಬೇಕು’ ಎಂದು ಮನವಿ ಮಾಡಿದರು.

‘2019ರಲ್ಲಿ ಬೆಂಗಳೂರು ದಕ್ಷಿಣದಲ್ಲಿ ಕೇವಲ ಶೇ 53ರಷ್ಟು ಮತದಾನವಾಗಿತ್ತು. ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ನಡೆಯಬೇಕು. ಅಪಾರ್ಟ್‌ಮೆಂಟ್‌ ನಿವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ಧಾವಿಸಿ ಹಕ್ಕು ಚಲಾಯಿಸಬೇಕು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.