ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ಇತ್ತೀಚೆಗೆ ನಡೆದ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ ಮತ್ತು ವಿಚಾರ ಸಂಕಿರಣದ ಅಂಗವಾಗಿ ಏರ್ಪಡಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ತಂಡ ‘ರನ್ನರ್ ಅಪ್’ ಸ್ಥಾನ ಪಡೆದುಕೊಂಡಿದೆ.
ವಿಶ್ವವಿದ್ಯಾಲಯದ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ಅಜಯ್ ಕುಮಾರ್ ‘ಪೋಸ್ಟರ್ ಮೇಕಿಂಗ್’ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಮೈತ್ರಿ ಮತ್ತು ತಂಡದವರು ‘ಸಮೂಹ ನೃತ್ಯ’ದಲ್ಲಿ ಹಾಗೂ ರೂಪಾರಾಣಿ ಮತ್ತು ತಂಡದವರು ಫ್ಯಾಷನ್ ಷೋನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರದ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥೆ ಸ್ವಾತಿ ಹಾಗೂ ಬಿಸಿಯು ಸಮಾಜ ಕಾರ್ಯ ವಿಭಾಗದ ಉಪನ್ಯಾಸಕ ವಿಕ್ರಮ್. ಕೆ. ಉಪಸ್ಥಿತರಿದ್ದರು.
ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ಸಮ್ಮೇಳನದಲ್ಲಿ ದೇಶದ ಹಲವಾರು ವಿಶ್ವವಿದ್ಯಾಲಯಗಳ ಮತ್ತು ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.