
ಪ್ರಜಾವಾಣಿ ವಾರ್ತೆ
ಬೆಂಗಳೂರು: ಶಬರಿಮಲೆ ದೇವಸ್ಥಾನದಿಂದ ಚಿನ್ನ ಕದ್ದ ಪ್ರಕರಣದ ತನಿಖೆ ನಡೆಸುತ್ತಿರುವ ಕೇರಳದ ವಿಶೇಷ ತನಿಖಾ ತಂಡವು (ಎಸ್‌ಐಟಿ) ಬೆಂಗಳೂರಿನ ವಿವಿಧೆಡೆಯೂ ಶುಕ್ರವಾರ ರಾತ್ರಿ ಪರಿಶೀಲನೆ ನಡೆಸಿದೆ.
ಪ್ರಕರಣದ ಪ್ರಮುಖ ಆರೋಪಿ ಉಣ್ಣಿಕೃಷ್ಣನ್ ಪೋಟಿ ಅವರನ್ನು ನಗರಕ್ಕೆ ಕರೆತಂದು ಮಹಜರು ನಡೆಸಲಾಗಿದೆ. ಉಣ್ಣಿಕೃಷ್ಣನ್ ಅವರು ಶ್ರೀರಾಂಪುರದ ಬಾಡಿಗೆ ಮನೆಯಲ್ಲಿ ಕೆಲವು ದಿನಗಳ ವಾಸ್ತವ್ಯ ಮಾಡಿದ್ದರು. ಅಲ್ಲಿ ಪರಿಶೀಲನೆ ನಡೆಸಿದ ತನಿಖಾಧಿಕಾರಿಗಳು, ಕೆಲವೊಂದು ದಾಖಲೆಗಳನ್ನು ಜಪ್ತಿ ಮಾಡಿಕೊಂಡು ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.