ADVERTISEMENT

ಬೆಂಗಳೂರು | ಹೊಸ ವರ್ಷಾಚರಣೆಗೆ ಸುರಕ್ಷತಾ ಕ್ರಮ ಕೈಗೊಳ್ಳಲಾಗಿದೆ: ಬಿ.ದಯಾನಂದ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2024, 15:46 IST
Last Updated 20 ಡಿಸೆಂಬರ್ 2024, 15:46 IST
ಬಿ.ದಯಾನಂದ 
ಬಿ.ದಯಾನಂದ    

ಬೆಂಗಳೂರು: ನಗರದಲ್ಲಿ ನಡೆಯುವ ಹೊಸ ವರ್ಷಾಚರಣೆಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ತಿಳಿಸಿದರು.

ನಗರದಲ್ಲಿ ಸುದ್ದಿಗಾರರ ಜತೆಗೆ ಶುಕ್ರವಾರ ಮಾತನಾಡಿದ ಅವರು, ‘ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಬಿಬಿಎಂಪಿ, ಬೆಸ್ಕಾಂ, ಮೆಟ್ರೊ, ಬಿಎಂಟಿಸಿ, ಅಗ್ನಿಶಾಮಕ ದಳ ಸೇರಿದಂತೆ ಪ್ರಮುಖ ಇಲಾಖೆಗಳ ಮುಖ್ಯಸ್ಥರು ಮತ್ತು ಅಧಿಕಾರಿಗಳ ಜತೆ ಸಭೆ ನಡೆಸಿ ಚರ್ಚಿಸಲಾಗಿದೆ’ ಎಂದು ಮಾಹಿತಿ ನೀಡಿದರು.

‘ಬಾರ್ ಆ್ಯಂಡ್‌ ರೆಸ್ಟೋರೆಂಟ್, ಕ್ಲಬ್, ಪಬ್ ಸೇರಿದಂತೆ ಕಾರ್ಯಕ್ರಮ ಆಯೋಜಿಸುವ ಆಯೋಜಕರೊಂದಿಗೆ ಚರ್ಚೆ ನಡೆಸಿದ್ದೇವೆ. ಕೆಲವು ಸೂಚನೆ ನೀಡಲಾಗಿದೆ. ಮಹಿಳೆಯರ ಸುರಕ್ಷತೆ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕೆಂದು ಪಾರ್ಟಿ ಆಯೋಜಕರಿಗೆ ತಿಳಿಸಲಾಗಿದೆ’ ಎಂದು ಪ್ರತಿಕ್ರಿಯಿಸಿದರು.

ADVERTISEMENT

ವಿಚಾರಣೆ ಪೂರ್ಣಗೊಂಡ ಬಳಿಕ ನಿರ್ಧಾರ

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಕೆಲವು ಆರೋಪಿಗಳಿಗೆ ಜಾಮೀನು ದೊರೆತಿದ್ದು ಅವರೆಲ್ಲರೂ ಬಿಡುಗಡೆ ಆಗಿದ್ದಾರೆ. ನ್ಯಾಯಾಲಯದ ತೀರ್ಪನ್ನು ಗೌರವಿಸಬೇಕು ಎಂದು ನಗರ ಪೊಲೀಸ್ ಕಮಿಷನರ್‌ ಬಿ.ದಯಾನಂದ ಹೇಳಿದರು. ‘ಹೈಕೋರ್ಟ್‌ ಮಂಜೂರು ಮಾಡಿರುವ ನಿಯಮಿತ (ರೆಗ್ಯುಲರ್‌) ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸುತ್ತೇವೆ. ಅಲ್ಲದೇ ಪ್ರಾಸಿಕ್ಯೂಷನ್ ವೈಫಲ್ಯ ಇತ್ತೇ ಎಂಬುದು ವಿಚಾರಣೆ ಪೂರ್ಣಗೊಂಡ ಬಳಿಕ‌ ನಿರ್ಧಾರವಾಗುತ್ತದೆ’ ಎಂದು ಪ್ರಶ್ನೆಗೆ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.