ADVERTISEMENT

ಫೆ.2ರಿಂದ ಹೆಬ್ಬಾಳ ಸಾಹಿತ್ಯ ಸಮ್ಮೇಳನ

​ಪ್ರಜಾವಾಣಿ ವಾರ್ತೆ
Published 30 ಜನವರಿ 2019, 19:17 IST
Last Updated 30 ಜನವರಿ 2019, 19:17 IST

ಬೆಂಗಳೂರು: ಹೆಬ್ಬಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 2ನೇ ಕನ್ನಡ ಸಾಹಿತ್ಯ ಸಮ್ಮೇಳನ ಮತ್ತು ಮಹಿಳಾ ಸಬಲೀಕರಣ ಸಮಾವೇಶ ಫೆ.2ರಿಂದ ಎರಡು ದಿನಗಳ ಕಾಲ ಹೆಬ್ಬಾಳದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಆವರಣದಲ್ಲಿನಡೆಯಲಿದೆ.

ಸಮ್ಮೇಳನದ ಅಧ್ಯಕ್ಷತೆಯನ್ನುಸಮಾಜ ಸೇವಕಿ ಎಸ್‌.ಜಿ.ಸುಶಿಲಮ್ಮ ಅವರು ವಹಿಸಿಕೊಳ್ಳಲಿದ್ದಾರೆ ಎಂದು ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಕಸಾಪ ಅಧ್ಯಕ್ಷ ಎಂ.ಅಶೋಕ್‌ ಕುಮಾರ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಸಮ್ಮೇಳನವನ್ನು ಹೆಬ್ಬಾಳ ಶಾಸಕ ಬಿ.ಎಸ್‌.ಸುರೇಶ್‌ ಉದ್ಘಾಟಿಸಲಿದ್ದಾರೆ.ಮೊದಲನೆ ದಿನ ಮಧ್ಯಾಹ್ನಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಲಿದೆ. ಸಂಜೆ 5 ಗಂಟೆಗೆ ಗಾಂಧೀಜಿಯವರ 150 ವರ್ಷಾಚರಣೆ ಸ್ಮರಣಾರ್ಥ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ವೂಡೇ ಪಿ.ಕೃಷ್ಣ ಅವರು ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಬಳಿಕ ಹಿಂದೂಸ್ತಾನ್‌ ಗೋಲ್ಡ್‌ ಕಂಪನಿಯ ಸಂಸ್ಥಾಪಕ ಎಂ.ಶರೀಫ್‌ ಅವರು ಪುಸ್ತಕ ಮಳಿಗೆಯನ್ನು ಉದ್ಘಾಟಿಸಲಿದ್ದಾರೆ’ ಎಂದು ಹೇಳಿದರು.

ADVERTISEMENT

‘ಸಮ್ಮೇಳನದಲ್ಲಿ ಭಾಷೆ ಮತ್ತು ಮಹಿಳಾ ಸಬಲೀಕರಣದ ಕುರಿತು ವಿಚಾರಗೋಷ್ಠಿಗಳು ನಡೆಯಲಿವೆ. ಸಾಧಕರಿಗೆ ವಿವಿಧ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುವುದು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.