ADVERTISEMENT

ಬೆಂಗಳೂರು | ಮಾದಕ ವಸ್ತುಗಳ ಮಾರಾಟ: ಆರೋಪಿ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2025, 15:30 IST
Last Updated 26 ಫೆಬ್ರುವರಿ 2025, 15:30 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಇಮ್ರಾನ್‌(30) ಎಂಬಾತನನ್ನು ಶೇಷಾದ್ರಿಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬಂಧಿತನಿಂದ 7 ಕೆ.ಜಿ. ಗಾಂಜಾ ಹಾಗೂ ಬೈಕ್‌ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.‌

ADVERTISEMENT

ಆರೋಪಿಯು ರೈಲ್ವೆ ಪ್ಯಾರಲಲ್‌ ರಸ್ತೆಯಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದಾನೆ ಎನ್ನುವ ಖಚಿತ ಮಾಹಿತಿ ಬಂದಿತ್ತು. ಅದನ್ನು ಆಧರಿಸಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.

‘ಆರೋಪಿಯನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಮಹಾರಾಷ್ಟ್ರದಿಂದ ಗಾಂಜಾವನ್ನು ತಂದು ಮಾರಾಟ ಮಾಡುತ್ತಿದ್ದೆ ಎಂಬುದಾಗಿ ಒಪ್ಪಿಕೊಂಡಿದ್ದಾನೆ. ವಿದ್ಯಾರ್ಥಿಗಳು, ಪಿ.ಜಿಯಲ್ಲಿ ನೆಲಸಿದ್ದದವರಿಗೆ ಗಾಂಜಾವನ್ನು ಪೂರೈಕೆ ಮಾಡುತ್ತಿದ್ದ ಎಂಬುದು ತನಿಖೆಯಿಂದ ಗೊತ್ತಾಗಿದೆ. ಬಂದ ಹಣದಲ್ಲಿ ಆರೋಪಿಯು ವಿಲಾಸಿ ಜೀವನ ನಡೆಸುತ್ತಿದ್ದ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.