ADVERTISEMENT

ಡ್ರಗ್ಸ್ ಮಾರಾಟ: ಬೆಂಗಳೂರಿನಲ್ಲಿ ಇಬ್ಬರು ಪೆಡ್ಲರ್‌ಗಳ ಬಂಧನ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2020, 8:20 IST
Last Updated 16 ನವೆಂಬರ್ 2020, 8:20 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಬೆಂಗಳೂರು:ಡ್ರಗ್ಸ್ ಮಾರಾಟದಲ್ಲಿ ನಿರತರಾಗಿದ್ದ ಇಬ್ಬರು ಪೆಡ್ಲರ್‌ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ನೈಜೀರಿಯಾದ ಮಾರ್ಕ್ ಹಾಗೂ ಹೆನ್ರಿ ಬಂಧಿತರು. ಅವರಿಂದ 6 ಮೊಬೈಲ್ ಹಾಗೂ ಪಾಸ್‌ಪೋರ್ಟ್ ಜಪ್ತಿ ಮಾಡಲಾಗಿದೆ.

'ಅಕ್ಟೋಬರ್ 30ರಂದು ನೈಜೀರಿಯಾದ ಪೆಡ್ಲರ್ ಸನ್ನಿ ಎಂಬಾತನನ್ನು ಬಂಧಿಸಲಾಗಿತ್ತು. ಆತನಿಂದ ಕೊಕೇನ್ ಜಪ್ತಿ ಮಾಡಲಾಗಿತ್ತು. ಆತ ನೀಡಿದ್ದ ದೂರು ಆಧರಿಸಿ ಇದೀಗ ಮಾರ್ಕ್ ಹಾಗೂ ಹೆನ್ರಿಯನ್ನು ಸೆರೆ ಹಿಡಿಯಲಾಗಿದೆ' ಎಂದು ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದರು.

ADVERTISEMENT

'ಆರೋಪಿಗಳು, ಹಲವು ವರ್ಷಗಳಿಂದ ನಗರದಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಮಾರ್ಕ್ ಬಳಿ ಮಾತ್ರ ಪಾಸ್‌ಪೋರ್ಟ್ ಇದೆ. ಹೆನ್ರಿ ಬಳಿ ಇಲ್ಲ' ಎಂದೂ ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.