ADVERTISEMENT

ಅವಧಿ ಮೀರಿದ ಆಹಾರೋತ್ಪನ್ನಗಳ ಮಾರಾಟ: ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 20 ಜುಲೈ 2025, 16:04 IST
Last Updated 20 ಜುಲೈ 2025, 16:04 IST
   

ಬೆಂಗಳೂರು: ಅವಧಿ ಮೀರಿದ ಆಹಾರೋತ್ಪನ್ನಗಳ ಮಾರಾಟ ಪತ್ತೆಗೆ ಸಂಬಂಧಿಸಿದಂತೆ ಆಹಾರ ಸುರಕ್ಷತೆ ಇಲಾಖೆ ಅಧಿಕಾರಿಗಳು ರಾಜ್ಯದಾದ್ಯಂತ 168 ಮಾಲ್‌ ಹಾಗೂ ಸೂಪರ್‌ ಮಾರುಕಟ್ಟೆಗಳಲ್ಲಿ ಪರಿಶೀಲನೆ ನಡೆಸಿದ್ದು, ಮೂರು ಮಾಲ್‌ಗಳಿಗೆ ನೋಟಿಸ್ ನೀಡಿದ್ದಾರೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006ರ ಅನ್ವಯ ಇಲಾಖೆ ಅಧಿಕಾರಿಗಳು ಮಾಲ್‌ಗಳು ಹಾಗೂ ಸೂಪರ್ ಮಾರುಕಟ್ಟೆಯಲ್ಲಿರುವ ವಿವಿಧ ಆಹಾರೋತ್ಪನ್ನಗಳನ್ನು ಪರಿಶೀಲಿಸಿದ್ದಾರೆ. ಬೆಳಗಾವಿಯ ಮೂರು ಮಾಲ್‌ಗಳಲ್ಲಿ ಅವಧಿ ಮೀರಿದ ತಂಪು ಪಾನೀಯ, ಬಾದಾಮಿ ಹಾಲು ಮಾರಾಟ ಮಾಡುತ್ತಿರುವುದು ಪತ್ತೆಯಾಗಿದೆ. 

‘ಅವಧಿ ಮೀರಿದ ಆಹಾರೋತ್ಪನ್ನಗಳ ಮಾರಾಟಕ್ಕೆ ಸಂಬಂಧಿಸಿದಂತೆ ಮಾಲ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಇಲಾಖೆ ಆಯುಕ್ತರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.