ADVERTISEMENT

ಪ್ರತಿಷ್ಠಿತ ಕಂಪನಿ ಹೆಸರಿನಲ್ಲಿ ಕಳಪೆ ಬಟ್ಟೆ ಮಾರಾಟ: ₹23.90ಲಕ್ಷ ಸಾಮಗ್ರಿ ಜಪ್ತಿ

​ಪ್ರಜಾವಾಣಿ ವಾರ್ತೆ
Published 12 ಜನವರಿ 2024, 15:21 IST
Last Updated 12 ಜನವರಿ 2024, 15:21 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಪ್ರತಿಷ್ಠಿತ ಕಂಪನಿಯ ಹೆಸರಿನಲ್ಲಿ ಕಳಪೆ ಗುಟ್ಟಮಟ್ಟದ ಶೂ, ಟೀ ಶರ್ಟ್‌ ಹಾಗೂ ಬೆಲ್ಟ್‌ಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ₹23.90 ಲಕ್ಷದ ಕಳಪೆ ಸಾಮಗ್ರಿ ಜಪ್ತಿ ಮಾಡಿಕೊಂಡಿದ್ದಾರೆ.

ಕಮರ್ಷಿಯಲ್‌ ಸ್ಟ್ರೀಟ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಸ್ಯಾಂಚುರಿ ಹಾಗೂ ಶ್ರೀಸಾಯಿ ಕಲೆಕ್ಷನ್‌ ಅಂಗಡಿಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ADVERTISEMENT

‘ಕಂಪನಿ ವ್ಯವಸ್ಥಾಕರು ನೀಡಿದ ದೂರಿನ ಮೇರೆಗೆ ದಾಳಿ ನಡೆಸಲಾಗಿತ್ತು. ಶೂ, ಬೆಲ್ಟ್‌ ಹಾಗೂ ಟೀ ಶರ್ಟ್‌ಗಳನ್ನು ದಾಸ್ತಾನು ಮಾಡಿಕೊಂಡು ಅವುಗಳಿಗೆ ಪ್ರತಿಷ್ಠಿತ ಕಂಪನಿ ಸ್ಟಿಕರ್‌ ಅಂಟಿಸಿ ಮಾರಾಟ ಮಾಡಲಾಗುತ್ತಿತ್ತು. ಕಳಪೆ ವಸ್ತುಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ’ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಕಮರ್ಷಿಯಲ್‌ ಸ್ಟ್ರೀಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.