ADVERTISEMENT

ಸಹಾಯಕ ತಂತ್ರಜ್ಞಾನದ ಜಾಗೃತಿ ಸಮಾವೇಶ ನಾಳೆ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2023, 16:29 IST
Last Updated 21 ಫೆಬ್ರುವರಿ 2023, 16:29 IST
.
.   

ಬೆಂಗಳೂರು: ಸಮರ್ಥನಂ ಅಂಗವಿಕಲರ ಸಂಸ್ಥೆ ಹಾಗೂ ‘ಪ್ರಜಾವಾಣಿ’ ಸಹಯೋಗದಲ್ಲಿ ಫೆ. 23ರಂದು ‘ಸಹಾಯಕ ತಂತ್ರಜ್ಞಾನದ ಕುರಿತು ಜಾಗೃತಿ ಸಮಾವೇಶ’ವನ್ನು ಹೋಟೆಲ್‌ ಚಾನ್ಸರಿ ಪೆವಿಲಿಯನ್‌ನಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ಸಮಾವೇಶದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್, ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿ ಇ.ವಿ. ರಮಣ ರೆಡ್ಡಿ, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕಿ ಕೆ.ಎಸ್. ಲತಾ ಕುಮಾರಿ, ಡಿಎಕ್ಸ್‌ಸಿ ಟೆಕ್ನಾಲಜಿಯ ಮಾನವ ಸಂಪನ್ಮೂಲ ಅಧಿಕಾರಿ ನಿಲೇಶ್‌ ದೇಶಪಾಂಡೆ, ಸಮರ್ಥನಂ ಅಂಗವಿಕಲರ ಸಂಸ್ಥೆಯ ಸಂಸ್ಥಾಪಕ ಟ್ರಸ್ಟಿ ಮಹಾಂತೇಶ್ ಜಿ. ಕಿವಡಸಣ್ಣವರ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT