ADVERTISEMENT

ಬೆಂಗಳೂರು | ‘ಸಂಪತ್ತಿಗೆ ಸವಾಲ್’ ನಾಟಕ ಪ್ರದರ್ಶನ ನ. 18ಕ್ಕೆ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2025, 20:14 IST
Last Updated 16 ನವೆಂಬರ್ 2025, 20:14 IST
   

ಬೆಂಗಳೂರು: ಹನುಮಸಾಗರದ ನಿಸರ್ಗ ಸಂಗೀತ ವಿದ್ಯಾಲಯ ಹಾಗೂ ರಂಗ ಕಲಾವಿದರ ಸಂಘ ಮತ್ತು ಕೊಪ್ಪಳ ಪತ್ರಕರ್ತರ ಬಳಗದ ಹವ್ಯಾಸಿ ಕಲಾವಿದರಿಂದ ಇದೇ 18ರಂದು ಸಂಜೆ 4 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ‘ಸಂಪತ್ತಿಗೆ ಸವಾಲ್’ ನಾಟಕ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. 

ನಾಟಕಕಾರ ಪಿ.ಬಿ.ಧುತ್ತರಗಿ ಮತ್ತು ಅವರ ಪತ್ನಿಯೂ ಆಗಿರುವ ರಂಗನಟಿ ಸರೋಜಮ್ಮ‌ ಧುತ್ತರಗಿ ಅವರ ಸ್ಮರಣಾರ್ಥವಾಗಿ ಈ ನಾಟಕ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರು ಈ ನಾಟಕ ಪ್ರದರ್ಶನ ಸಮಾರಂಭ ಉದ್ಘಾಟಿ ಸಲಿದ್ದು, ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಮರೇಗೌಡ ಪಾಟೀಲ ಬಯ್ಯಾಪುರ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT