ADVERTISEMENT

ಸಂಪಿಗೆ ರಸ್ತೆ: ವಾಹನ ಸಂಚಾರ ನಿಷೇಧ

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2018, 20:10 IST
Last Updated 31 ಅಕ್ಟೋಬರ್ 2018, 20:10 IST

ಬೆಂಗಳೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ಮಲ್ಲೇಶ್ವರದ ಸಂಪಿಗೆ ರಸ್ತೆ 18ನೇ ಅಡ್ಡರಸ್ತೆ ಜಂಕ್ಷನ್ ಬಳಿ ‘ಗೋಕಾಕ್ ಚಳವಳಿ ಸ್ಮರಣಾರ್ಥ ವೃತ್ತ’ ಹಾಗೂ ‘ಡಾ.ರಾಜಕುಮಾರ’ ಪುತ್ಥಳಿ ಅನಾವರಣ ಕಾರ್ಯಕ್ರಮ ನಡೆಯಲಿದೆ.

ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆವರೆಗೂ ಸಂಪಿಗೆ ರಸ್ತೆಯಲ್ಲಿ ಸಂಚಾರ ವ್ಯವಸ್ಥೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸಮಾರಂಭದಲ್ಲಿ ಕನ್ನಡಾಭಿಮಾನಿಗಳು, ಸಾಹಿತಿಗಳು, ನಟ–ನಟಿಯರು ಭಾಗವಹಿಸುವರು.

‘ಸಾರ್ವಜನಿಕರಿಗೆ ತೊಂದರೆ ಆಗದಂತೆ ಬದಲಿ ಮಾರ್ಗ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ’ ಎಂದು ಮಲ್ಲೇಶ್ವರ ಪೊಲೀಸರು ಹೇಳಿದರು.

ADVERTISEMENT

ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

* ಮಲ್ಲೇಶ್ವರದ ಸಂಪಿಗೆ ರಸ್ತೆಯಿಂದ ಯಶವಂತಪುರ ಕಡೆಗೆ ಹೋಗುವ ವಾಹನಗಳು ಸಂಪಿಗೆ ರಸ್ತೆಯ 15ನೇ ಅಡ್ಡರಸ್ತೆಯಲ್ಲಿ ಎಡತಿರುವು ಪಡೆದು 8ನೇ ಮುಖ್ಯರಸ್ತೆಯ ಮೂಲಕ ಹೋಗಬಹುದು

* ಸ್ಯಾಂಕಿ ರಸ್ತೆ ಕಡೆಗೆ ಹೋಗುವ ವಾಹನಗಳು ಮಾರ್ಗೋಸಾ ರಸ್ತೆಯ 18ನೇ ಅಡ್ಡರಸ್ತೆಯಲ್ಲಿ ಎಡ ತಿರುವು ಪಡೆದು ಸದಾಶಿವನಗರದ ಭಾಷ್ಯಂ ವೃತ್ತದ ಮೂಲಕ ತಲುಪಬಹುದು. ಅಲ್ಲದೆ ಸಂಪಿಗೆ ರಸ್ತೆ 15ನೇ ಅಡ್ಡರಸ್ತೆಯಲ್ಲಿ ಬಲ ತಿರುವು ಪಡೆದು ಕೂಡ ಹೋಗಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.