ADVERTISEMENT

ನಾಗೇಶ್ ಹೆಗಡೆ ಸೇರಿ 8 ಮಂದಿಗೆ ‘ಸಂಸ್ಕೃತಿ ಸಿರಿ’ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2022, 16:02 IST
Last Updated 16 ನವೆಂಬರ್ 2022, 16:02 IST
ನಾಗೇಶ್ ಹೆಗಡೆ
ನಾಗೇಶ್ ಹೆಗಡೆ   

ಬೆಂಗಳೂರು:ಡಾ. ವೇಮಗಲ್ ನಾರಾಯಣಸ್ವಾಮಿ ಸಾಂಸ್ಕೃತಿಕ ಪ್ರತಿಷ್ಠಾನ ನೀಡುವ ‘ಸಂಸ್ಕೃತಿ ಸಿರಿ’ ಪ್ರಶಸ್ತಿಗೆ ವಿಜ್ಞಾನ ಲೇಖಕ ಹಾಗೂ ಪತ್ರಕರ್ತ ನಾಗೇಶ್ ಹೆಗಡೆ ಸೇರಿ 8 ಮಂದಿ ಆಯ್ಕೆಯಾಗಿದ್ದಾರೆ.

ಚಲನಚಿತ್ರ ಗಾಯಕಿ ಕಸ್ತೂರಿ ಶಂಕರ್, ಕನ್ನಡಪರ ಹೋರಾಟಗಾರ ರಾಮಣ್ಣ ಕೋಡಿಹೊಸಹಳ್ಳಿ, ಕವಿ ಕೋಟಗಾನಹಳ್ಳಿ ರಾಮಯ್ಯ, ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಸಮ ಕಾರ್ಯದರ್ಶಿ ಕಡಿದಾಳ್ ಪ್ರಕಾಶ್, ಕಾಡುಮಲ್ಲೇಶ್ವರ ಗೆಳೆಯರ ಬಳಗದ ಸಂಸ್ಥಾಪನಾಧ್ಯಕ್ಷ ಬಿ.ಕೆ. ಶಿವರಾಂ, ವಾಗ್ಮಿ ಸುಧಾ ಬರಗೂರು ಹಾಗೂ ನೃತ್ಯ ಗುರು ಸುಪರ್ಣ ವೆಂಕಟೇಶ್ ಅವರು ‘ಸಂಸ್ಕೃತಿ ಸಿರಿ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ₹ 25 ಸಾವಿರ ನಗದು ಹಾಗೂ ಫಲಕವನ್ನು ಒಳಗೊಂಡಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಇದೇ 20ರಂದು ಬೆಳಗ್ಗೆ 11.30ಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.ಉಪಲೋಕಾಯುಕ್ತ ಕೆ.ಎನ್. ಫಣೀಂದ್ರ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ನಿವೃತ್ತ ಐಎಎಸ್ ಅಧಿಕಾರಿ ಐ.ಎಂ. ವಿಠ್ಠಲಮೂರ್ತಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಪ್ರತಿಷ್ಠಾನದ ಗೌರವ ಅಧ್ಯಕ್ಷ ಹಿ.ಚಿ. ಬೋರಲಿಂಗಯ್ಯ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.