
ಪ್ರಜಾವಾಣಿ ವಾರ್ತೆ
ಯಲಹಂಕ: ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಮಾರೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸಂಧ್ಯಾ ಸುಂದರೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪಿ.ರಾಹುಲ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣಾ ಪ್ರಕ್ರಿಯೆ ನಡೆಯಿತು. ಒಟ್ಟು 21 ಸದಸ್ಯ ಬಲ ಹೊಂದಿರುವ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ಸಂಧ್ಯಾ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆ ನಡೆಯಿತು.
ಈ ವೇಳೆ ಮಾತನಾಡಿದ ಸಂಧ್ಯಾ, ‘ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗದ ಮಹಿಳೆಯೊಬ್ಬರು ಆಯ್ಕೆಯಾಗಲು ಕಂದಾಯ ಸಚಿವ ಕೃಷ್ಣಬೈರೇಗೌಡ ಅವಕಾಶ ಕಲ್ಪಿಸಿದ್ದಾರೆ’ ಎಂದು ತಿಳಿಸಿದರು.