ADVERTISEMENT

‘ಬಡ್ತಿ ಮೀಸಲಾತಿ: ಸ್ವಾಮೀಜಿ ಹೇಳಿಕೆ ಹಿಂಪಡೆಯಲಿ’

‘ಬಡ್ತಿ ಮೀಸಲಾತಿ ಬೇಡ’ ಎಂದಿದ್ದ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2019, 20:00 IST
Last Updated 4 ಆಗಸ್ಟ್ 2019, 20:00 IST
   

ಬೆಂಗಳೂರು:‘ಬಡ್ತಿ ಮೀಸಲಾತಿ ಬೇಡ ಎಂದು ಸಾಣೇಹಳ್ಳಿ ಪಂಡಿತಾರಾಧ್ಯ ಸ್ವಾಮೀಜಿ ಹೇಳಿರುವುದು ದಲಿತ ಸಮುದಾಯಕ್ಕೆ ದಿಗ್ಭ್ರಮೆ ಮೂಡಿಸಿದೆ. ಕೂಡಲೇ ಅವರು ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು’ ಎಂದು ರಾಜ್ಯ ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ.

‘ಶತಮಾನಗಳಿಂದ ವಂಚಿತರಾಗಿದ್ದ ಕೆಳ ಸಮುದಾಯಗಳಿಗೆ ಅನುಭವ ಮಂಟಪದಲ್ಲಿ ಬಸವಣ್ಣ ಅವಕಾಶ ಮಾಡಿಕೊಟ್ಟಿದ್ದರು. ಇಂತಹ ಅನುಭವ ಮಂಟಪದ ಮಾದರಿಯನ್ನೇ ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಸಂವಿಧಾನದಲ್ಲಿ ಅಳವಡಿಸಿದ್ದರು’ ಎಂದು ಸಮಿತಿ ಹೇಳಿದೆ.

‘ಜಾತಿಯ ಅಸಮಾನತೆ ಎಲ್ಲಿಯವರೆಗೆ ಇರುತ್ತದೆಯೋ, ಅಲ್ಲಿಯವರೆಗೆ ಮೀಸಲಾತಿ, ಬಡ್ತಿ ಮೀಸಲಾತಿ ನೀಡುವುದು ಸಾಮಾಜಿಕ ನ್ಯಾಯದ ಬದ್ಧತೆ. ಬಡ್ತಿ ಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್‌ ಕೂಡ ದಲಿತರ ಪರ ತೀರ್ಪು ನೀಡಿದೆ. ಬಡ್ತಿ ಮೀಸಲಾತಿ ಏಕೆ ನೀಡುತ್ತಿದ್ದಾರೆ ಎಂಬ ಬಗ್ಗೆ ಸ್ವಾಮೀಜಿಯವರಿಗೆ ಅರಿವಿನ ಕೊರತೆ ಇದೆ’ ಎಂದು ಸಮಿತಿಯ ರಾಜ್ಯ ಸಂಚಾಲಕ ಲಕ್ಷ್ಮೀನಾರಾಯಣ ನಾಗವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.