ADVERTISEMENT

ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2021, 3:33 IST
Last Updated 25 ಮಾರ್ಚ್ 2021, 3:33 IST
ಸಂಗೂಳ್ಳಿರಾಯಣ್ಣ ಪ್ರತಿಮೆಯನ್ನು ನಿರಂಜನಾನಂದಪುರಿ ಸ್ವಾಮೀಜಿ ಅನಾವರಣ ಮಾಡಿದರು. ಈಶ್ವರಾನಂದಪುರಿ ಸ್ವಾಮೀಜಿ, ರಾಮಾನುಜ ಮಠದ ತ್ರಿದಂಡಿವೆಂಕಟರಾಮಾನುಜ ಸ್ವಾಮೀಜಿ, ರೇವಣಸಿದ್ದೇಶ್ವರ ಸ್ವಾಮೀಜಿ,  ಶ್ರೀಯೋಗೇಶ್ವರಾನಂದಸ್ವಾಮೀಜಿ, ರಾಮೋಹಳ್ಳಿ ಗ್ರಾಮಪಂಚಾಯಿತಿ ಸದಸ್ಯ ಜಿ.ಮಹೇಶ್, ಮುರಾದ ಶಿವಮಾದಯ್ಯ, ಎ.ಶಿವಕುಮಾರ್, ಎಸ್.ಚೇತನ್ ಇದ್ದಾರೆ.

ರಾಜರಾಜೇಶ್ವರಿನಗರ: ‘ಪರಕೀಯರನ್ನು ದೇಶದಿಂದ ತೊಲಗಿಸಲು ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟವರು ಸಂಗೊಳ್ಳಿ ರಾಯಣ್ಣ. ಅವರ ಹಾದಿಯಲ್ಲಿ ನಡೆಯುವ ಮೂಲಕ ಸಮಾಜವನ್ನು ಕಟ್ಟುವ ಕೆಲಸದಲ್ಲಿ ಎಲ್ಲರೂ ಕೈಜೋಡಿಸಬೇಕು’ ಎಂದು ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಕರೆ ನೀಡಿದರು.

ಗುಲಗಂಜನಹಳ್ಳಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ ಸಂಗೂಳ್ಳಿರಾಯಣ್ಣ ಪ್ರತಿಮೆ ಅನಾವರಣ ಮಾಡಿ ಅವರು ಮಾತನಾಡಿದರು.

‘ಪ್ರತಿಮೆ ನಿರ್ಮಾಣ ಮಾಡಿದರೆ ಸಾಲದು. ಅವರ ತತ್ವ, ಆದರ್ಶಗಳನ್ನು ಮೈಗೂಡಿಸಿಕೊಂಡು ಅವರಂತೆಯೇ ದೇಶಪ್ರೇಮಿಯಾದಾಗ ಮಾತ್ರ ಸಾರ್ಥಕ ಭಾವ ಮೂಡುತ್ತದೆ’ ಎಂದರು.

ADVERTISEMENT

ಹೊಸದುರ್ಗ ಕನಕಗುರು ಪೀಠದ ಶ್ರೀಈಶ್ವರನಂದಪುರಿ ಸ್ವಾಮೀಜಿ ‘ಮಾನವ, ವನ್ಯ ಜೀವಿ ಉಳಿಯಬೇಕಾದರೆ ಎಲ್ಲರೂ ಸಸಿ ನೆಡುವ ಮೂಲಕ ಪರಿಸರ ಪ್ರೇಮ ಮೆರೆಯಬೇಕು’ ಎಂದರು.

ಗ್ರಾಮದ ವೀರಯೋಧ ಕಿರಣ್ ಕುಮಾರ್ ಅವರಿಗೆ ಬೆಳ್ಳಿ ಕಿರೀಟ ನೀಡಿ ಸನ್ಮಾನಿಸಲಾಯಿತು. ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.