ಸಂಗೊಳ್ಳಿ ರಾಯಣ್ಣ ಪ್ರತಿಮೆ (ಸಂಗ್ರಹ ಚಿತ್ರ)
ನೆಲಮಂಗಲ: ಕುರುಬ ಸಮುದಾಯದ ವಿದ್ಯಾರ್ಥಿ ನಿಲಯ ಕಟ್ಟಡ ₹ 1 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿದೆ. ತಾಲ್ಲೂಕಿನ ಬ್ಯಾಡರಹಳ್ಳಿಯಲ್ಲಿ ಕನಕ ಭವನ ಹಾಗೂ ಅಂಗವಿಕಲರ ಶಾಲೆ ನಿರ್ಮಾಣಕ್ಕೆ ಒಂದು ಎಕರೆ ಐದು ಗುಂಟೆ ಜಮೀನು ಮಂಜೂರಾಗಿದೆ ಎಂದು ಶಾಸಕ ಎನ್. ಶ್ರೀನಿವಾಸ್ ತಿಳಿಸಿದರು.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಟ್ರಸ್ಟ್ ಹಮ್ಮಿಕೊಂಡಿದ್ದ ಸಂಗೊಳ್ಳಿ ರಾಯಣ್ಣ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬೆಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಬಿ.ಡಿ. ಗಂಗರಾಜು, ಪದವಿಪೂರ್ವ ಶಿಕ್ಷಣ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕ ಸಿ. ಅಶ್ವತ್ಥನಾರಾಯಣ, ನಗರಸಭೆ ಅಧ್ಯಕ್ಷ ಎನ್. ಗಣೇಶ್, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎಂ. ನಾರಾಯಣ ಗೌಡ, ಟ್ರಸ್ಟ್ ಅಧ್ಯಕ್ಷ ವಿ.ಪಿ.ಉಜ್ಜಿನಪ್ಪ, ಶೆಫರ್ಡ್ ಇಂಡಿಯಾ ಇಂಟರ್ ನ್ಯಾಷನಲ್ ರಾಜ್ಯ ಯುವ ಘಟಕ ಅಧ್ಯಕ್ಷ ಚೇತನ್, ಮುಖಂಡರಾದ ಕೆ.ನಾಗರಾಜು, ಡಿ. ಸಿದ್ದರಾಜು, ಲೋಕೇಶ್, ಮುನಿರಾಜು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.