ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಜಯಂತ್ಯುತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಮಾಲಾರ್ಪಣೆ ಕಾರ್ಯಕ್ರಮದಲ್ಲಿ ಜಾನಪದ ಕಲಾ ತಂಡಗಳು ನೃತ್ಯ ಪ್ರದರ್ಶಿಸಿದವು
ಪ್ರಜಾವಾಣಿ ಚಿತ್ರ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ 228ನೇ ಜಯಂತ್ಯುತ್ಸವ ಅಂಗವಾಗಿ ದೇವರಾಜ ಅರಸು ವೃತ್ತದಲ್ಲಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾನ ನಗರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿವಿಧ ಜಾನಪದ ಕಲಾ ತಂಡಗಳು ನೃತ್ಯ ಪ್ರದರ್ಶಿಸಿದವು.
ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ, ಬಿಬಿಎಂಪಿ ಆಡಳಿತಾಧಿಕಾರಿ ತುಷಾರ್ ಗಿರಿನಾಥ್, ಮುಖ್ಯ ಆಯುಕ್ತ ಮಹೇಶ್ವರ್ ರಾವ್, ಪಶ್ಚಿಮ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್, ಜಂಟಿ ಆಯುಕ್ತ ಸಂಗಪ್ಪ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.