ಬೆಂಗಳೂರು:ಪಾದಚಾರಿ ಮಾರ್ಗ ದಲ್ಲಿದ್ದ ಮರದಲ್ಲಿ ನೇತಾಡುತ್ತಿದ್ದ ವಿದ್ಯುತ್ ಕೇಬಲ್‌ನ ತಂತಿ ಸ್ಪರ್ಶಿಸಿ ಕಿಶೋರ್ (22) ಎಂಬುವರು ಮೃತಪಟ್ಟಿರುವ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಂಜಯನಗರ ಠಾಣೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
‘ಏರ್‌ಟೆಲ್ ಕಂಪನಿಯ ಸಂಜಯನಗರದ ಉಸ್ತುವಾರಿಯಾಗಿರುವ ನವೀನ್ ಎಂಬುವರನ್ನು ಈಗಾಗಲೇ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಅವರು ನೀಡಿದ ಮಾಹಿತಿ ಮೇರೆಗೆ ಮತ್ತೊಬ್ಬರನ್ನು ವಶಕ್ಕೆ ಪಡೆದಿದ್ದೇವೆ. ಇನ್ನೂ ಇಬ್ಬರ ವಿಚಾರಣೆ ನಡೆಸಬೇಕಿದೆ. ಸದ್ಯಕ್ಕೆ ಯಾರನ್ನೂ ಬಂಧಿಸಿಲ್ಲ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.