ADVERTISEMENT

ಸಂತೋಷ್ ಹೆಗ್ಡೆ ಅವಹೇಳನ ಸಲ್ಲ: ಹೂಡಿ ರಾಮಚಂದ್ರ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2025, 18:48 IST
Last Updated 1 ಡಿಸೆಂಬರ್ 2025, 18:48 IST
ಹೂಡಿ ರಾಮಚಂದ್ರ
ಹೂಡಿ ರಾಮಚಂದ್ರ   

ಕೆ.ಆರ್.ಪುರ: ‘ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಅವರ ವಿರುದ್ಧ ಅಪಪ್ರಚಾರ ಮಾಡುತ್ತಿರುವುದು ಸರಿಯಲ್ಲ’ ಎಂದು ಭಾರತೀಯ ಸೇವಾ ಸಮಿತಿಯ ರಾಷ್ಟ್ರೀಯ ಅಧ್ಯಕ್ಷ ಹೂಡಿ ರಾಮಚಂದ್ರ ಹೇಳಿದ್ದಾರೆ.

‘ಖಾಸಗಿ ಕಾರ್ಯಕ್ರಮವೊಂದರಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರಿಗೆ ಸನ್ಮಾನ ಮಾಡಿರುವುದನ್ನೇ ದೊಡ್ಡದು ಮಾಡಿ ಅವರ ವಿರುದ್ಧ ಅಪಪ್ರಚಾರ ಮಾಡುವ ಮೂಲಕ ಕೆಟ್ಟ ಹೆಸರು ತರಲು ಯತ್ನಿಸುತ್ತಿರುವುದನ್ನು ಒಪ್ಪಲಾಗದು’ ಎಂದು ತಿಳಿಸಿದ್ದಾರೆ.

‘ಸಂತೋಷ್‌ ಹೆಗ್ಡೆ ಅವರು ಭ್ರಷ್ಟಾಚಾರದ ವಿರುದ್ಧ ಸಮರ ಸಾರಿದ್ದರು. ಭ್ರಷ್ಟ ಅಧಿಕಾರಿಗಳು ಮತ್ತು ರಾಜಕಾರಣಿಗಳನ್ನು ಜೈಲಿಗೆ ಹಾಕಿಸಿ ಭ್ರಷ್ಟರಿಗೆ ಸಿಂಹಸ್ವಪ್ನವಾಗಿದ್ದನ್ನು ನಾವು ಮರೆಯಬಾರದು’ ಎಂದು ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.