ADVERTISEMENT

ಸೀರೆ ಕದ್ದ ಆರೋಪ: ಮಹಿಳೆಗೆ ಬೂಟುಕಾಲಿನಿಂದ ಒದ್ದ ಅಂಗಡಿ ಮಾಲೀಕ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2025, 0:10 IST
Last Updated 26 ಸೆಪ್ಟೆಂಬರ್ 2025, 0:10 IST
<div class="paragraphs"><p>ಎ.ಐ ಚಿತ್ರ</p></div>

ಎ.ಐ ಚಿತ್ರ

   

ಬೆಂಗಳೂರು: ಸೀರೆ ಕಳವು ಮಾಡಿದ್ದಾರೆ ಎಂದು ಆರೋಪಿಸಿ ಮಹಿಳೆಗೆ ಬಟ್ಟೆ ಅಂಗಡಿ ಮಾಲೀಕರೊಬ್ಬರು ಬೂಟುಕಾಲಿನಿಂದ ಒದ್ದಿದ್ದಾರೆ.‌ ಈ ದೃಶ್ಯವು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸೀರೆ ಅಂಗಡಿ ಮಾಲೀಕನ ವರ್ತನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಅವೆನ್ಯೂ ರಸ್ತೆಯ ಮಾಯಾ ಸಿಲ್ಕ್ ಸ್ಯಾರೀಸ್ ಅಂಗಡಿ ಮಾಲೀಕ ಬಾಬುಲಾಲ್ ಎಂಬುವರು ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ‌. ಮಾಲೀಕ ಮಾತ್ರವಲ್ಲದೇ ಅಂಗಡಿ ಸಿಬ್ಬಂದಿ ಸಹ ಮಹಿಳೆಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ನೋವಿನಿಂದ ಮಹಿಳೆ ಕಿರುಚಾಡಿ ಅಂಗಲಾಚಿದರೂ ಸಹ ಬಿಟ್ಟಿಲ್ಲ. ಮಹಿಳೆ ಮೇಲೆ ಹಲ್ಲೆ ಮಾಡಿದ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ.

ADVERTISEMENT

'ಮಹಿಳೆಯ ನೆರವಿಗೆ ಪೊಲೀಸರು ಬಂದಿಲ್ಲ.‌ ಅಂಗಡಿ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕಾದ ಪೊಲೀಸರು ಮಹಿಳೆಯನ್ನೇ ವಶಕ್ಕೆ ಪಡೆದುಕೊಂಡಿದ್ದಾರೆ' ಎಂದು ಸ್ಥಳೀಯರು ದೂರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.