ಸಾತನೂರು ಗ್ರಾ.ಪಂ ಅಧ್ಯಕ್ಷ ಕೃಷ್ಣಪ್ಪ ಅವರ
ಯಲಹಂಕ: ಬ್ಯಾಟರಾಯನಪುರ ಕ್ಷೇತ್ರದ ಸಾತನೂರು ಗ್ರಾಮಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಎಂ.ಕೃಷ್ಣಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಶಿವಣ್ಣ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕಾಗಿ ಶುಕ್ರವಾರ ಚುನಾವಣೆ ನಡೆಯಿತು. ಒಟ್ಟು 11 ಸದಸ್ಯಬಲ ಹೊಂದಿರುವ ಪಂಚಾಯಿತಿಯಲ್ಲಿ ಕೃಷ್ಣಪ್ಪ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು.
ಈ ವೇಳೆ ಮಾತನಾಡಿದ ಅಧ್ಯಕ್ಷ ಕೃಷ್ಣಪ್ಪ, ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು ಮತ್ತು ಕಸದ ಸಮಸ್ಯೆ ನಿವಾರಣೆ ಸೇರಿ ಮೂಲಸೌಕರ್ಯಗಳನ್ನು ಕಲ್ಪಿಸಲು ಮೊದಲ ಆದ್ಯತೆ ನೀಡಲಾಗುವುದು. ಪಂಚಾಯಿತಿ ಕಚೇರಿಯ ಕಟ್ಟಡ ನಿರ್ಮಿಸಲು ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ತಡೆಯಾಜ್ಞೆಯಿದೆ. ತೆರವಾದ ಕೂಡಲೇ ಎಲ್ಲ ಸದಸ್ಯರ ಸಹಕಾರದೊಂದಿಗೆ ನೂತನ ಕಟ್ಟಡ ನಿರ್ಮಿಸಲಾಗುವುದು ಎಂದು ತಿಳಿಸಿದರು.
ಪಂಚಾಯಿತಿ ಸದಸ್ಯರಾದ ಮಾಲ ಎಂ, ಜಿಲಾನಿ ಎ.ಕೆ, ಮಾನಸ ಬಿ.ಆರ್, ಸುಜಾತ ಎಸ್.ಎಲ್, ಅಶ್ವಿನಿ ಕೆ.ಎನ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.