ಯಲಹಂಕ: ಜಾಲ ಹೋಬಳಿ ಸಾತನೂರು ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾಗಿ ಮಾಲ.ಎಂ ಸುಬ್ರಮಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜಾಹೇರ ತಸ್ನೀಂ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕಾಗಿ ಮಂಗಳವಾರ ಚುನಾವಣಾ ಪ್ರಕ್ರಿಯೆ ನಡೆಯಿತು. ಒಟ್ಟು 11 ಸದಸ್ಯ ಬಲದ ಪಂಚಾಯಿತಿಯಲ್ಲಿ ಮಾಲ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಕೃಷ್ಣಪ್ಪ.ಎಂ, ಸದಸ್ಯರಾದ ಶಿವಣ್ಣ, ಮಾನಸ ಕೃಷ್ಣಪ್ಪ, ಸುಜಾತ ಆನಂದ್, ಅಶ್ವಿನಿ ನವೀನ್, ಮುನಿತಿಮ್ಮರಾಯಪ್ಪ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.