ADVERTISEMENT

ಜಾರಕಿಹೊಳಿ ಪ್ರತಿಕೃತಿ ದಹಿಸಿ ‍ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2022, 21:05 IST
Last Updated 9 ನವೆಂಬರ್ 2022, 21:05 IST

ಬೆಂಗಳೂರು: ‘ಹಿಂದೂ ಧರ್ಮದ ಬಗ್ಗೆ ಸತೀಶ ಜಾರಕಿಹೊಳಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ’ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

‘ನಾನು ಸ್ವಾಭಿಮಾನಿ ಹಿಂದೂ’ ಎಂಬ ಬರಹವುಳ್ಳ ಫಲಕ ಪ್ರದರ್ಶಿಸಿದ ಪ್ರತಿಭಟನಕಾರರು, ಸತೀಶ ಜಾರಕಿಹೊಳಿ ಹಾಗೂ ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗಿದರು.

ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ್ದ ಪ್ರತಿಭಟನಾಕಾರರು, ಸತೀಶ ಜಾರಕಿಹೊಳಿ ಪ್ರತಿಕೃತಿಗೆ ಬೆಂಕಿ ಹಚ್ಚಿ ದಹಿಸಲು ಮುಂದಾದರು. ಸ್ಥಳದಲ್ಲಿದ್ದ ಪೊಲೀಸರು, ಬೆಂಕಿ ನಂದಿಸಿದರು. ಪ್ರತಿಭಟನೆ ಹೆಚ್ಚಾಗುತ್ತಿದ್ದಂತೆ ಕೆಲ ಕಾರ್ಯಕರ್ತರನ್ನು ವಶಕ್ಕೆ ಪಡೆದು, ಕೆಲ ಹೊತ್ತಿನ ಬಳಿಕ ಬಿಡುಗಡೆ ಮಾಡಿದರು.

ADVERTISEMENT

‘ಹಿಂದೂ ಪದಕ್ಕೆ ಕೆಟ್ಟ ಅರ್ಥವಿದೆ’ ಎಂದಿರುವ ಹೇಳಿರುವ ಸತೀಶ ಜಾರಕಿಹೊಳಿ, ಧಾರ್ಮಿಕ ವೈಷಮ್ಯಕ್ಕೆ ಪ್ರಚೋದನೆ ನೀಡಿದ್ದಾರೆ. ಸನಾತನ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ, ಜನರ ನಂಬಿಕೆಗಳಿಗೆ ಧಕ್ಕೆ ತಂದಿದ್ದಾರೆ. ಸತೀಶ ಅವರು ಕೂಡಲೇ ಕ್ಷಮೆ ಕೇಳಬೇಕು. ಇವರ ವಿರುದ್ಧ ಪ್ರಕರಣ ದಾಖಲಿಸಿ, ಜೈಲಿಗೆ ಕಳುಹಿಸಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.