
ಪ್ರಜಾವಾಣಿ ವಾರ್ತೆ
ಸಾಂದರ್ಭಿಕ ಚಿತ್ರ
– ಐಸ್ಟಾಕ್ ಚಿತ್ರ
ಬೆಂಗಳೂರು: ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಅ.22ರಂದು ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಸಹಕಾರ ನೀಡಲಾಗುವುದು ಎಂದು ಸತ್ವ ಗ್ರೂಪ್ ತಿಳಿಸಿದೆ.
‘ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳ ಎದುರು ನೈಜ ಸಂಗತಿಯನ್ನು ತಿಳಿಸುತ್ತೇವೆ. ಅಶ್ವಿನ್ ಸಂಚೆಟಿ ಹಾಗೂ ಸತ್ವ ಗ್ರೂಪ್ ವಿರುದ್ಧ ದೂರುದಾರರು ಮಾಡಿರುವ ಆರೋಪಗಳಿಗೂ, ವಾಸ್ತವ ಸ್ಥಿತಿಗೂ ವ್ಯತ್ಯಾಸವಿದೆ. ನಮ್ಮ ಬಳಿ ದಾಖಲೆಗಳಿವೆ. ಸತ್ವ ಗ್ರೂಪ್‌ನ ಯಾವುದೇ ಸದಸ್ಯರು ಕಾನೂನುಬಾಹಿರ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ’ ಎಂದು ಪ್ರಕಟಣೆ ತಿಳಿಸಿದೆ.
ಜಮೀನು ಕಬಳಿಕೆಗೆ ನಕಲಿ ದಾಖಲೆ ಸೃಷ್ಟಿಸಿದ್ದ ಆರೋಪದ ಅಡಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ವ ಗ್ರೂಪ್ ಈ ಸ್ಪಷ್ಟನೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.