ಬೆಂಗಳೂರು: ನ್ಯಾ. ನಾಗಮೋಹನ್‌ದಾಸ್ ವರದಿಯ ಆಧಾರದಲ್ಲಿ ಒಳಮೀಸಲಾತಿ ಜಾರಿಯಾಗುವವರೆಗೆ ಉಪವಾಸ ಸತ್ಯಾಗ್ರಹ ನಡೆಸಲು ಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ ಹೋರಾಟ ಸಮಿತಿ ನಿರ್ಧರಿಸಿದೆ.
ಗುರುವಾರ ಮಧ್ಯರಾತ್ರಿ 12ಕ್ಕೆ ಸತ್ಯಾಗ್ರಹ ಸ್ವಾತಂತ್ರ್ಯ ಉದ್ಯಾನದಲ್ಲಿ ಆರಂಭಗೊಳ್ಳಲಿದೆ. ಹೋರಾಟ ಸಮಿತಿಯ ಮುಖಂಡರಾದ ಅಂಬಣ್ಣ ಆರೋಲಿಕರ, ಬಸವರಾಜ್ ಕೌತಾಳ್, ಎಸ್. ಮಾರಪ್ಪ, ಕರಿಯಪ್ಪ ಗುಡಿಮನೆ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಯಲಿದೆ ಎಂದು ಸಮಿತಿಯ ಮುಖಂಡರು ತಿಳಿಸಿದ್ದಾರೆ.
ಸತ್ಯಾಗ್ರಹದ ಅಂಗವಾಗಿ ‘ನಟ್ಟಿರುಳ ನಾದ’ ಅಹೋರಾತ್ರಿ ಸಾಂಸ್ಕೃತಿಕ ಪ್ರತಿರೋಧ ಕಾರ್ಯಕ್ರಮ ನಡೆಯಿತು. ತಳಸಮುದಾಯದ ಹೋರಾಟಗಾರರು, ಸಾಹಿತಿಗಳು, ಕಲಾವಿದರು ತಮಟೆ, ಹಾಡುಗಳ ಮೂಲಕ, ನಾಟಕ, ಮಾತುಗಳ ಮೂಲಕ ಪ್ರತಿರೋಧವನ್ನು ದಾಖಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.