ADVERTISEMENT

‘ದಲಿತರ ಮೇಲಿನ ದೌರ್ಜನ್ಯ; ತನಿಖೆ ಆಗಬೇಕು’

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2018, 19:13 IST
Last Updated 17 ನವೆಂಬರ್ 2018, 19:13 IST

ಬೆಂಗಳೂರು: ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಮಾಣದಲ್ಲಿ ಬೆಂಗಳೂರು ಎರಡನೇ ಸ್ಥಾನದಲ್ಲಿದೆ ಎಂಬುದು ಅತ್ಯಂತ ಕಳವಳಕಾರಿ ಎಂದು ಯುವ ನೇತಾರರ ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷ ಸುನೀಲ್‌ ಕುಮಾರ್‌ ಹೇಳಿದ್ದಾರೆ.

ಪ್ರಜಾವಾಣಿಯ ನ. 13ರ ಸಂಚಿಕೆಯಲ್ಲಿ ದಲಿತರ ಮೇಲಿನ ದೌರ್ಜನ್ಯ ಹೆಚ್ಚಳ, ನ. 14ರಂದು ದಲಿತರ ಮೇಲಿನ ದೌರ್ಜನ್ಯ ನಗರದಲ್ಲೇ ಹೆಚ್ಚು ವರದಿಗಳಿಗೆ ಪ್ರತಿಕ್ರಿಯಿಸಿರುವ ಅವರು, ಈ ಬಗ್ಗೆ ನಗರದ ಯಾವುದೇ ದಲಿತಪರ ಸಂಘಟನೆಗಳು, ಮಾಧ್ಯಮಗಳು ಧ್ವನಿಯೆತ್ತದಿರುವುದು ಕಳವಳಕಾರಿ. ಮುಖ್ಯಮಂತ್ರಿ ಕೂಡಾ ಈ ಬಗ್ಗೆ ಮಾತನಾಡಿಲ್ಲ. ದಲಿತ ಸಮುದಾಯದವರೇ ಆದ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರೂ ಮಾತನಾಡುತ್ತಿಲ್ಲ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ದಲಿತರ ಮೇಲಿನ ದೌರ್ಜನ್ಯ ಸಂಬಂಧಿಸಿದಂತೆ ಮುಖ್ಯಮಂತ್ರಿ ತಮ್ಮ ನಿಲುವು ಸ್ಪಷ್ಟಪಡಿಸಬೇಕು. ಇಂಥ ಪ್ರಕರಣಗಳ ಆರೋಪಿಗಳ ವಿರುದ್ಧ ಪ್ರಾಮಾಣಿಕ ತನಿಖೆ ನಡೆದು ನ್ಯಾಯ ಕೊಡಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.