ADVERTISEMENT

ಬೆಂಗಳೂರು | ಪರಿಶಿಷ್ಟರ ಅಭಿವೃದ್ಧಿಗೆ ಅನುದಾನ ನೀಡಿ– ಆಗ್ರಹ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2026, 1:10 IST
Last Updated 22 ಫೆಬ್ರುವರಿ 2026, 1:10 IST
   

ಬೆಂಗಳೂರು: ‘ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ 2026–27ನೇ ಸಾಲಿನ ಬಜೆಟ್‌ನಲ್ಲಿ ಹೆಚ್ಚು ಅನುದಾನ ಒದಗಿಸಬೇಕು’ ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಎನ್. ಮೂರ್ತಿ ಆಗ್ರಹಿಸಿದರು. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೂರು ವರ್ಷಗಳಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್‌ಸಿಎಸ್‌ಪಿ) ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಯ (ಟಿಎಸ್‌ಪಿ) ಅನುದಾನ ವನ್ನು ಗ್ಯಾರಂಟಿ ಯೋಜನೆ ಸೇರಿ ಇತರೆ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಬಳಕೆ ಮಾಡಲಾಗಿದೆ. ಅನ್ಯಾಯ ಸರಿಪಡಿಸಲು ಹೆಚ್ಚು ಅನುದಾನ ನೀಡಬೇಕು’ ಎಂದರು. 

‘ಡಾ.ಬಿ.ಆರ್. ಅಂಬೇಡ್ಕರ್‌ ನಿಗಮ,
ಆದಿಜಾಂಬವ ನಿಗಮ, ಬಾಬು ಜಗಜೀವನ್‌ ರಾಮ್‌ ನಿಗಮ ಸೇರಿದಂತೆ ನಮ್ಮ ಸಮುದಾಯದ ಎಲ್ಲ ನಿಗಮಗಳಿಗೆ ತಲಾ ₹3 ಸಾವಿರ ಕೋಟಿ ಅನುದಾನ ನೀಡಬೇಕು. ನಾಗಮೋಹನದಾಸ್ ವರದಿಯಂತೆ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಪ್ರಮಾಣ ಹಂಚಿಕೆ ಮಾಡಿ, ಜಾರಿಗೊಳಿಸಬೇಕು’ ಎಂದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.