ಯಲಹಂಕ: ವಿದ್ಯಾಪೋಷಕರ ಸಂಘದಿಂದ 2024ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡ 90ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದು ಉತ್ತೀರ್ಣರಾದ ಆರ್ಥಿಕವಾಗಿ ದುರ್ಬಲರಾದ, ಒಕ್ಕಲಿಗ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿ ಗಳಿಂದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು ಉತ್ತರ ತಾಲ್ಲೂಕು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾ ಪುರ ಮತ್ತು ಕೋಲಾರ ಜಿಲ್ಲೆಗಳ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ವಿಳಾಸ, ಮೊಬೈಲ್ ಸಂಖ್ಯೆ ವಿವರಗಳಿರುವ ಅರ್ಜಿಯೊಂದಿಗೆ ಜಾತಿ ಹಾಗೂ ವರಮಾನ ಪ್ರಮಾಣಪತ್ರ, ಆಧಾರ್ ಮತ್ತು ದೃಢೀಕೃತ ಅಂಕಪಟ್ಟಿಯ ನಕಲು ಪ್ರತಿಗಳನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ: ‘ಅಧ್ಯಕ್ಷರು,ವಿದ್ಯಾಪೋಷಕರ ಸಂಘ, ನಂ.12, ಇಂಚರ, 2ನೇ ಮುಖ್ಯರಸ್ತೆ, ಸುರಭಿ ಬಡಾವಣೆ, ಯಲಹಂಕ, ಬೆಂಗಳೂರು–560064’. ಜುಲೈ 31, ಅರ್ಜಿ ಸಲ್ಲಿಸಲು ಕೊನೆಯ ದಿನ. ವಿವರಗಳಿಗೆ: 9008891539, 9845048696 ಮೊಬೈಲ್ ಸಂಖ್ಯೆಗೆ ಸಂಪರ್ಕಿಸಬಹುದು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.