
ಎಫ್‌ಐಆರ್
(ಸಾಂದರ್ಭಿಕ ಚಿತ್ರ)
ಬೆಂಗಳೂರು: ಹೋಂವರ್ಕ್ ಮಾಡಿಲ್ಲವೆಂದು ನಾಲ್ಕನೇ ತರಗತಿಯ ವಿದ್ಯಾರ್ಥಿಗೆ ಶಿಕ್ಷಕಿಯೊಬ್ಬರು ಬಾಸುಂಡೆ ಬರುವಂತೆ ಥಳಿಸಿದ್ದು, ಈ ಸಂಬಂಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಂದಿನಿ ಲೇಔಟ್ ವೀಣಾ ವಿದ್ಯಾ ಸಂಸ್ಥೆಯ ಶಿಕ್ಷಕಿ ಆಂಗ್ಲಿನ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಹೇಳಿದರು.
ಮಹಾರಾಷ್ಟ್ರದಲ್ಲಿ ಕೆಲಸ ಮಾಡುತ್ತಿದ್ದ ಲಕ್ಷ್ಮಿ ಅವರು ತಮ್ಮ ಮಗನನ್ನು ಹಾಸ್ಟೆಲ್‌ನಲ್ಲಿ ವ್ಯಾಸಂಗಕ್ಕೆ ಬಿಟ್ಟಿದ್ದರು. ಇತ್ತೀಚೆಗೆ ಮಗನನ್ನು ನೋಡಲು ಬಂದಾಗ, ಆತನ ಕೈ ಮತ್ತು ದೇಹದ ವಿವಿಧ ಭಾಗಗಳಲ್ಲಿ ಬಾಸುಂಡೆ ಗುರುತುಗಳು ಕಂಡು ಬಂದಿದ್ದವು.
‘ಈ ವಿಚಾರವನ್ನು ಪೋಷಕರಿಗೆ ತಿಳಿಸಿದರೆ ಕುತ್ತಿಗೆ ಹಿಸುಕುವುದಾಗಿ ಶಿಕ್ಷಕಿ ಬೆದರಿಕೆ ಹಾಕಿದ್ದರು. ಹೀಗಾಗಿ ತಾನು ಏನೂ ಹೇಳಿಕೊಂಡಿಲ್ಲ’ ಎಂದು ತಾಯಿಯ ಬಳಿ ವಿದ್ಯಾರ್ಥಿ ಹೇಳಿಕೊಂಡಿದ್ದ. ಬಳಿಕ ಬಾಲಕನ ತಾಯಿ ಠಾಣೆಗೆ ದೂರು ನೀಡಿದ್ದಾರೆ. ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.