ADVERTISEMENT

ತರಾತುರಿಯಲ್ಲಿ ಶಾಲಾ ಕಟ್ಟಡ ಉದ್ಘಾಟನೆ

ಕೋವಿಡ್‌ ವೇಳೆಯಲ್ಲಿ ಮಕ್ಕಳ ಬಳಕೆಗೆ ಗ್ರಾಮಸ್ಥರ ಅಸಮಾಧಾನ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2020, 18:28 IST
Last Updated 5 ಸೆಪ್ಟೆಂಬರ್ 2020, 18:28 IST
ಕೊಡಗಿ ತಿರುಮಲಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಮಕ್ಕಳು 
ಕೊಡಗಿ ತಿರುಮಲಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಮಕ್ಕಳು    

ಹೆಸರಘಟ್ಟ: ಕೊಡಗಿ ತಿರುಮಲಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ಮತ್ತು ಬಯಲು ರಂಗಮಂದಿರವನ್ನು ತರಾತುರಿಯಲ್ಲಿ ಉದ್ಘಾಟಿಸಿದ್ದು ಏಕೆ ಎಂದು ಗ್ರಾಮಸ್ಥರು ಪ್ರಶ್ನಿಸಿದ್ದಾರೆ.

‘ಶಾಲೆಗಳು ಇನ್ನೂ ಪ್ರಾರಂಭಗೊಂಡಿಲ್ಲ. ಕಟ್ಟಡದ ಕೆಲಸಗಳು ಪೂರ್ಣಗೊಂಡಿಲ್ಲ. ಆದರೂ, ಉದ್ಘಾಟನಾ ಕಾರ್ಯಕ್ರಮ ಏರ್ಪಡಿಸಲಾಯಿತು. ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಅವರನ್ನು ಸ್ವಾಗತಿಸಲು ಶಾಲಾ ಮಕ್ಕಳು ವಾದ್ಯ ಬಾರಿಸುತ್ತಿದ್ದರು.ಕೋವಿಡ್ ಈ ಸಮಯದಲ್ಲಿ ಶಾಲಾ ಮಕ್ಕಳನ್ನು ಹೀಗೆ ಬಳಸಿಕೊಳ್ಳುವುದು ಎಷ್ಟು ಸರಿ’ ಎಂದು ಬಿಳಿಜಾಜಿ ನಿವಾಸಿ ಗೋವಿಂದರಾಜು ಪ್ರಶ್ನಿಸಿದರು.

ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯ ಅನುದಾನದಿಂದ ಗ್ರಾಮದಲ್ಲಿ ಶಾಲಾ ಕಟ್ಟಡ ಮತ್ತು ಬಯಲು ರಂಗಮಂದಿರವನ್ನು ನಿರ್ಮಿಸಲಾಗಿದೆ. ಅದರೆ ಕನಿಷ್ಠ ಪಕ್ಷ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮತ್ತು ಗ್ರಾಮದ ಹೆಸರನ್ನು ಕಟ್ಟಡದ ಮೇಲೆ ಬರೆಸಿಲ್ಲ ಎಂದು ಗ್ರಾಮದ ನಿವಾಸಿ ಮಂಜುನಾಥ್ ಬೇಸರ ವ್ಯಕ್ತಪಡಿಸಿದರು.

ADVERTISEMENT

ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಎಂಜಿನಿಯರ್‌ ಶ್ರೀನಾಥ್, ‘ವಾರದೊಳಗೆ ಶಾಲಾ ಕಟ್ಟಡದ ಮೇಲೆ ಬರಹ ಬರೆಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.